ಮತ್ತೊಂದು ವಿವಾದಿತ ಹೇಳಿಕೆ ನೀಡಿದ ರೇಣುಕಾಚಾರ್ಯ..!

ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಗೆ ಗ್ರಾಸವಾಗುವ ಸಿಎಂ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಇತ್ತೀಚೆಗಷ್ಟೇ ಮಸೀದಿ ಮದರಸಗಳಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಡಲಾಗಿದೆ ಎಂಬ ಹೇಳೀಕೆಯನ್ನು ನೀಡಿದ ಬೆನ್ನಲ್ಲೇ  ಮುಸ್ಲಿಮರಿಗೆ ಸಿಗುತ್ತಿರುವ ಸೌಲಭ್ಯಗಳನ್ನು ನಿರ್ಬಂಧಗೊಳಿಸುತ್ತೇನೆ ಎಂಬ ಹೇಳಿಕೆ ನೀಡಿದ್ದಾರೆ.

ಮುಸ್ಲಿಮರು ನನಗೆ ಮತ ಹಾಕಿಲ್ಲ ಹಾಗಾಗಿ ನನ್ನ ಕ್ಷೇತ್ರದಲ್ಲಿರುವ ಮುಸ್ಲಿಮರ ಅಭಿವೃದ್ಧಿಗಾಗಿ ಕೆಲಸ ಮಾಡುವುದಿಲ್ಲ ಎಂದು ಹೇಳುವುದರ ಮೂಲಕ ವಿವಾದದಲ್ಲಿ ಸಿಲಿಕಿದ್ದಾರೆ.

ಶಾಸಕರ ಈ ಹೇಳಿಕೆಯ ಬಗ್ಗೆ ಮುಖ್ಯಮಂತ್ರಿಯವರನ್ನು ತೀವ್ರ ಮುಜುಗರಕ್ಕೀಡುಮಾಡಿದ್ದು ಈ ಬಗ್ಗೆ ಅವರು ಏನೂ ಹೇಳಿಲ್ಲ.  

ನಂತರ ಈ ಘಟನೆಯ ಬಗ್ಗೆ ಮಾತನಾಡಿದ ರೇಣುಕಾಚಾರ್ಯ ತಾನು ಮುಸ್ಲಿಂ ಸಮುದಾಯಕ್ಕೆ ಸಿಗುತ್ತಿರುವ ಸೌಲಭ್ಯಗಳನ್ನು  ನಿರ್ಬಂಧಗೊಳಿಸುವೆ ಎಂದು ಹೇಳಿಲ್ಲ, ಅವರಿಗೆ ಸಿಗುತ್ತಿರುವ ಕೆಲವೊಂದು ವಿಶೇಷ ಸೌಲಭ್ಯಗಳನ್ನು ನಿರ್ಬಂಧಗೊಳಿಸುವುದಾಗಿ ಹೇಳಿರುವುದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here