ಮಹಾರಾಷ್ಟ್ರದ ’ಯಡಿಯೂರಪ್ಪ’ ಘಡ್ನವೀಸ್

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ವಿಶ್ವಾಸಮತಯಾಚನೆಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ

ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್ ನಾಳೆ ಸಂಜೆ 5 ಗಂಟೆಯ ಒಳಗಡೆ ವಿಶ್ವಾಸಮತ ಸಾಬೀತುಪಡಿಸಬೇಕು, ವಿಶ್ವಾಸಮತ ಯಾಚನೆ ವೇಳೆ ನೇರ ಪ್ರಸಾರ ಮಾಡಬೇಕು ಹಾಗೂ ಗುಪ್ತ ಮತದಾನಕ್ಕೆ ಅವಕಾಶವಿಲ್ಲ ಎಂದು ಬಿಜೆಪಿ ಸರ್ಕಾರಕ್ಕೆ ಸೂಚಿಸಿತ್ತು.

ಈ ಆದೇಶದ ನಂತರ ಸಂಖ್ಯಾಬಲ ಇಲ್ಲದ ಹಿನ್ನೆಲೆಯಲ್ಲಿ ಅಜಿತ್ ಪವಾರ್ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದರ ಬೆನ್ನಲ್ಲೇ ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡುವುದಾಗಿ ಫಡ್ನವೀಸ್ ಪ್ರಕಟಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫಡ್ನವೀಸ್, ಅಜಿತ್ ಪವಾರ್ ಬೆಂಬಲ ನೀಡಿದಾಗ ಸರ್ಕಾರ ರಚಿಸುವ ಪ್ರಸ್ತಾಪವನ್ನು ಸಲ್ಲಿಸಿ ಪ್ರಮಾಣ ವಚನ ಸ್ವೀಕರಿಸಲಾಯ್ತು. ಸದ್ಯ ನಮ್ಮಲ್ಲಿ  ಸಂಖ್ಯಾಬಲವಿಲ್ಲ. ಹಾಗಾಗಿ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಹಾಗೆಯೇ ಬಿಜೆಪಿ ವಿಪಕ್ಷ ಸ್ಥಾನದಲ್ಲಿ ಕುಳಿತು ಸಮರ್ಥವಾಗಿ ಕೆಲಸ ನಿಭಾಯಿಸುತ್ತದೆ. ವಿಭಿನ್ನ ಪಕ್ಷದ ಜನರು ಹೇಗೆ ಸರ್ಕಾರ ನಡೆಸುತ್ತಾರೆ ಎಂಬುವುದು ಗೊತ್ತಾಗುತ್ತಿಲ್ಲ ಎಂದರು.

LEAVE A REPLY

Please enter your comment!
Please enter your name here