ಮಾಧ್ಯಮದವರ ಕಿರಿಕಿರಿಗೆ ರಾಜೀನಾಮೆ ಕೊಡುತ್ತೇನೆ ಎಂದೆ – ಮಾತು ಬದಲಿಸಿದ ಸಚಿವ ಮಾಧುಸ್ವಾಮಿ

ಪಕ್ಷ ಮತ್ತು ಸರ್ಕಾರಕ್ಕಾಗಿ ಸಚಿವ ಸ್ಥಾನ ಮಾತ್ರವಲ್ಲ ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡಲು ಸಿದ್ಧ ಎಂದಿದ್ದ ಸಣ್ಣ ನೀರಾವರಿ ಸಚಿವ ಜೆ ಸಿ ಮಾಧುಸ್ವಾಮಿ ಒಂದೇ ದಿನಕ್ಕೆ ಮಾತು ಬದಲಿಸಿದ್ದಾರೆ. ವಿಧಾನಸೌಧದಲ್ಲಿ ಮಾತಾಡಿದ ಅವರು,

ಮಾಧ್ಯಮದವರು ಕೇಳಿದ ಪ್ರಶ್ನೆಯಿಂದ ನನಗೆ ಕಿರಿಕಿರಿ ಆಯಿತು. ಪದೇ ಪದೇ ಒತ್ತಿ ಒತ್ತಿ ಅದೇ ಪ್ರಶ್ನೆ ಕೇಳಿದರು. ಆ ಪ್ರಶ್ನೆಯಿಂದ ಕಿರಿಕಿರಿ ಆಗಿ ಕೊನೆಗೆ ರಾಜೀನಾಮೆ ನೀಡುತ್ತೇನೆ ಎಂದೆ. ಆದರೆ ನನಗೆ ರಾಜೀನಾಮೆ ನೀಡುವ ಯೋಚನೆಯೇ ಇಲ್ಲ. ಹೈಕಮಾಂಡ್‌ ಕೂಡಾ ಅಂತಹ ಪ್ರಸ್ತಾಪ ಮುಂದಿಟ್ಟಿಲ್ಲ. ಸಚಿವ ಸಂಪುಟ ವಿಸ್ತರಣೆ ಮಾತ್ರ ಆಗಲಿದೆ, ಆದ್ರೆ ಪುನರ್‌ರಚನೆ ಅಲ್ಲ. ಹಿರಿಯ ಸಚಿವರು ರಾಜೀನಾಮೆ ಕೊಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಆದರೆ ನಾನು ರಾಜೀನಾಮೆ ನೀಡುವ ಸಂದರ್ಭವೇ ಇಲ್ಲ

ಎಂದು ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ನಿನ್ನೆ ತುಮಕೂರಲ್ಲಿ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಾಧುಸ್ವಾಮಿ ಪಕ್ಷ ಬಯಸಿದರೆ ಸಚಿವ ಸ್ಥಾನದ ಜೊತೆಗೆ ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡಲು ಸಿದ್ಧ ಎಂದಿದ್ದರು.

LEAVE A REPLY

Please enter your comment!
Please enter your name here