ಮೀನುಗಾರರು, ಮೀನುಗಾರ ಮಹಿಳೆಯರಿಗೆ ವಿಶೇಷ ಯೋಜನೆ

ಮೀನುಗಾರ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಜೆಟ್​ನಲ್ಲಿ ವಿಶೇಷ ಯೋಜನೆ ಘೋಷಿಸಲಾಗಿದೆ.

ಮೀನುಗಾರ ಮಹಿಳೆಯರಿಗೆ ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿ 50,000 ರೂ. ಗಳಿಂದ 3 ಲಕ್ಷ ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದ ಡೀಸೆಲ್‌ ಮಿತಿಯನ್ನು0 2 ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲಾಗಿದೆ. ಇದಕ್ಕಾಗಿ 250 ಕೋಟಿ ರೂ. ನೆರವು ನೀಡಲಾಗುತ್ತದೆ.

ಮೀನುಗಾರಿಕಾ ದೋಣಿಗಳ ಸೀಮೆಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್‌ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡಲಾಗುತ್ತದೆ. ಇದಕ್ಕಾಗಿ 5ಕೋಟಿ ರೂ. ನೆರವು ನೀಡಲಾಗುತ್ತದೆ.

LEAVE A REPLY

Please enter your comment!
Please enter your name here