ಮುಖ್ಯಮಂತ್ರಿಗಳೇ ತಮ್ಮ ವೈವಾಹಿಕ ಸಂಬಂಧ ಸ್ಪಷ್ಟಪಡಿಸಿ – ಸಿದ್ದರಾಮಯ್ಯ

‘ರಾಜ್ಯದ ಯಾವ ಶಾಸಕರೂ ಏಕಪತ್ನಿವ್ರತಸ್ಥರಲ್ಲ’ ಎಂಬ ಸಚಿವ ಸುಧಾಕರ್ ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಎಲ್ಲರೂ ತಕ್ಷಣ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ಟರ್ ಮುಖೇನಾ ಒತ್ತಾಯಿಸಿದ್ದಾರೆ.

ಸಚಿವ ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ವಿರೋಧಿಸುವುದಾಗಿದ್ದರೆ ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವ ಇಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ.. ಅವರೂ ಕೂಡಾ ಮುಖ್ಯಮಂತ್ರಿಗೆ ತಕ್ಷಣ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸಚಿವ ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ, ರಾಜ್ಯ ಸರ್ಕಾರ ತಕ್ಷಣ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮಕೈಗೊಳ್ಳಬೇಕು ಎಂದು ವಿಪಕ್ಷ ನಾಯಕರು ಒತ್ತಾಯಿಸಿದ್ದಾರೆ..

1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ ಎಂಬುದನ್ನು ಸಿದ್ದರಾಮಯ್ಯ ನೆನಪಿಸಿದ್ದಾರೆ.

LEAVE A REPLY

Please enter your comment!
Please enter your name here