ಮೈಶುಗರ್‌ ಕಾರ್ಖಾನೆಯ ಖಾಸಗೀಕರಣ ಬೇಡ, ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸಿ – ಸಿಎಂ ಯಡಿಯೂರಪ್ಪಗೆ ಡಿಕೆಶಿ ಪತ್ರ

ಮಂಡ್ಯ ಮೈಶುಗರ್‌ ಕಾರ್ಖಾನೆಯ ಖಾಸಗೀಕರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಮೈಶುಗರ್‌ ಸಕ್ಕರೆ ಕಾರ್ಖಾನೆಯನ್ನು ಖಾಸಗೀಕರಣ ಮಾಡಿದರೆ ರೈತರ ಶೋಷಣೆಗೆ ಕಾರಣವಾಗುತ್ತದೆ. ಖಾಸಗಿ ಸಕ್ಕರೆ ಲಾಬಿಗೆ ಮಣಿದು ಖಾಸಗಿಯವರಿಗೆ ಸ್ಪರ್ಧೆ ಇಲ್ಲದಂತೆ ಮಾಡುವುದು ಬೇಡ. ಮೈಶುಗರ್ ಕಾರ್ಖಾನೆ ಕರ್ನಾಕದಲ್ಲೇ ಮೊದಲ ಹಾಗೂ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾಗಿದ್ದು ಮಂಡ್ಯ ಜಿಲ್ಲೆಯ ರೈತರ ಹಾಗೂ ಜನರ ಬದುಕಿನ ಬೆನ್ನೆಲುಬಾಗಿದೆ ಎಂದು ಡಿಕೆಶಿ ಪತ್ರದಲ್ಲಿ ಹೇಳಿದ್ದಾರೆ.

ರಾಜ್ಯದಲ್ಲಿ ಸಕ್ಕರೆ ಉತ್ಪಾದನೆಯಲ್ಲಿ ಈ ಕಾರ್ಖಾನೆ ಮುಂಚೂಣಿಯಲ್ಲಿದೆ. ಹೀಗಾಗಿ ಈ ಕಾರ್ಖನೆಯನ್ನು ಖಾಸಗೀಕರಣ ಮಾಡುವ ನಿರ್ಧಾರವನ್ನು ಸರ್ಕಾರ ಕೈಬಿಟ್ಟು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳಬೇಕು ಮನವಿ ಮಾಡಿದ್ದಾರೆ.

ಖಾಸಗಿ ಕಾರ್ಖಾನೆಗಳು ಉತ್ತಮವಾಗಿಲ್ಲ. ಈಗಲೂ ಕಬ್ಬು ಬೆಳೆಗಾರರಿಗೆ ಕೋಟ್ಯಾಂತರ ರೂಪಾಯಿ ಬಾಕಿ ಉಳಿಸಿಕೊಂಡಿವೆ. ಸುಸ್ಥಿತಿಯಲ್ಲಿರುವ ಸಕ್ಕರೆ ಕಾರ್ಖಾನೆಯಿಂದ ಕಬ್ಬು ಅರೆಯುವುದನ್ನು ಆರಂಭಿಸಬೇಕು ಮತ್ತು ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿ ಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸಿಎಂಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here