ಮೈಸೂರು ಎಪಿಎಂಸಿಯಲ್ಲಿ ರೈತ ಕ್ಯಾಂಟೀನ್‌ ಆರಂಭ

ಮೈಸೂರು ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಮೈಸೂರು ಧಾನ್ಯ ವರ್ತಕರ ಸಂಘದ ವತಿಯಿಂದ ರೈತರಿಗಾಗಿ ಭೋಜನ ಮಂದಿರ ಅರಂಭವಾಗಿದೆ.

ಭೋಜನ ಮಂದಿರವನ್ನು ಸಹಕಾರ ಸಚಿವರೂ ಆಗಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌ ಟಿ ಸೋಮಶೇಖರ್‌ ಉದ್ಘಾಟಿಸಿದರು. ನಗರಾಭಿವೃದ್ಧಿ ಸಚಿವ ಬಿ ಎ ಬಸವರಾಜು ಮತ್ತು ಶಾಸಕ ಜಿ ಟಿ ದೇವೇಗೌಡ ಕೂಡಾ ಇದ್ದರು.

ರೈತರ ಕ್ಯಾಂಟೀನ್ ಆದ ಭೋಜನ ಮಂದಿರವನ್ನು ಪರಿಶೀಲಿಸಿದ ಸಚಿವದ್ವಯರು, ಆಹಾರ ತಯಾರಿಕೆಯ ಶುಚಿತ್ವವನ್ನು ಗಮನಿಸಿದರು. ರೈತರಿಗೆ ಸ್ವತಃ ಉಪಾಹಾರ ಬಡಿಸಿದರು.

ಎಪಿಎಂಸಿ ಭೇಟಿ ವೇಳೆ ಕೋಲ್ಡ್ ಸ್ಟೋರೇಜ್ ಗಾಗಿ ಅನುಮತಿ ಕೋರಲಾಗಿತ್ತು. ಈಗ ಅದಕ್ಕೂ ಈಗ ಅನುಮತಿ ನೀಡಲಾಗಿದೆ. ಎಪಿಎಂಸಿ ಅಭಿವೃದ್ಧಿಗೆ ಅನುದಾನ ಬೇಕೆಂದು ಸ್ಥಳೀಯ ಶಾಸಕರಾದಿಯಾಗಿ ಹಲವರು ಕೇಳಿಕೊಂಡಿದ್ದರು. ಅದಕ್ಕೋಸ್ಕರ ಸರ್ಕಾರದಿಂದ 4 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ.

ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆರಂಭಿಸಲಾಗಿರುವ ಕ್ಯಾಂಟೀನ್‌ಗಾಗಿ ತಾತ್ಕಾಲಿಕವಾಗಿ ಜಾಗ ನೀಡಲು ಎಪಿಎಂಸಿ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಇಲ್ಲಿ ಕ್ಯಾಂಟೀನ್‌ನ ನಿರ್ವಹಣೆ, ಗುಣಮಟ್ಟ ಹಾಗೂ ರೈತರೆಲ್ಲರಿಗೂ ಆಹಾರ ಸಿಗುತ್ತದೆಯೇ ಎಂಬ ಅಂಶವನ್ನು ಕೆಲ ಸಮಯಗಳ ಕಾಲ ನಿಗಾ ವಹಿಸಲಾಗುತ್ತದೆ. ಅವರ ಸೇವೆ ತೃಪ್ತಿಕರವಾಗಿದ್ದರೆ ಜಾಗದ ಖಾಯಂ ಮಂಜೂರಾತಿಗೆ ನಿರ್ಧರಿಸಲಾಗುವುದು ಎಂದು ಸಚಿವ ಸೋಮಶೇಖರ್ ತಿಳಿಸಿದರು.

LEAVE A REPLY

Please enter your comment!
Please enter your name here