ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌..?

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರದ ಸಂಪುಟ ವಿಸ್ತರಣೆ ಬಹುತೇಕ ಶುಕ್ರವಾರ ನಡೆಯುವ ಸಾಧ್ಯತೆ ಇದೆ. ಜನವರಿ ೩೦ರಂದು ಬಿಎಸ್‌ವೈ ದೆಹಲಿಗೆ ಹೋಗಲಿದ್ದಾರೆ. ದೆಹಲಿ ಭೇಟಿ ವೇಳೆ ಹೊಸದಾಗಿ ಆಯ್ಕೆ ಆಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಜೊತೆಗೆ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ಮೂಲಗಳ ಪ್ರಕಾರ ಈಗಾಗ್ಲೇ ಬೆಂಗಳೂರಲ್ಲಿ ಯಡಿಯೂರಪ್ಪ ಜೊತೆಗೆ ಮಾತುಕತೆ ನಡೆಸಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್‌ ಸಂತೋಷ್‌ ಸಂಭವನೀಯ ಸಚಿವರ ಪಟ್ಟಿಯನ್ನು ನಡ್ಡಾಗೆ ಒಪ್ಪಿಸಿದ್ದಾರೆ. ಯಡಿಯೂರಪ್ಪ-ನಡ್ಡಾ ಭೇಟಿ ವೇಳೆ ಪಟ್ಟಿಗೆ ಅಂತಿಮ ರೂಪ ನೀಡಲಾಗುತ್ತದೆ.

LEAVE A REPLY

Please enter your comment!
Please enter your name here