ರಸ್ತೆ ಅಪಘಾತದಲ್ಲಿ ಖಾಸಗಿ ಚಾನೆಲ್‌ ವರದಿಗಾರ ನಿಧನ‌

ಪಬ್ಲಿಕ್ ಟಿವಿಯ ರಾಮನಗರದ ಜಿಲ್ಲಾ ವರದಿಗಾರ ಹನುಮಂತು ಇಂದು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.

ರಾಮನಗರದ ಜಿಲ್ಲಾ ಕಾರಾಗೃಹದ ಬಳಿ ವರದಿ ಮಾಡಿ ಹಿಂದಿರುಗುತ್ತಿದ್ದ ವೇಳೆ ರಾಮನಗರದ ಡಾಬಾ ಬಳಿ ಹಿಂದಿನಿಂದ ಬಂದ ಎಟಿಎಂಗೆ ಹಣ ತುಂಬುವ ವಾಹನ ಹನುಮಂತ ಅವರ ಬೈಕಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಮನಗರದ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳನ್ನು ಪರಪ್ಪನ ಅಗ್ರಹಾರ ಸ್ಥಳಾಂತರಿಸುವ ಕುರಿತು ತಮ್ಮ ಕೊನೆಯ ವರದಿಯನ್ನು ನೀಡಿದ್ದರು.

ವರದಿಗಾರ ಹನುಮಂತು ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಅಶ್ವತ್ಥ್‌ ನಾರಾಯಣ ೫ ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ.

 

LEAVE A REPLY

Please enter your comment!
Please enter your name here