ರಾಜಕೀಯ ಕ್ಷೇತ್ರಕ್ಕೆ ಅಡಿ ಇಡಲು ಸಜ್ಜಾದ ನಟಿ ಕಂಗನಾ

ಹೊಸದಿಲ್ಲಿ: ನಟಿ ಕಂಗನಾ ರಣಾವತ್ ರಾಜಕೀಯ ಪ್ರವೇಶಿಸುವ ಸುಳಿವು ನೀಡಿದ್ದು, ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಕಂಗನಾ 2024ರ ಲೋಕಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಹೌದು ಹಿಮಾಚಲದ ಮಂಡಿ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿಯುವ ಹಿಂಗಿತವನ್ನು ಕಂಗನಾ ವ್ಯಕ್ತಪಡಿಸಿದ್ದು, ಹಿಮಾಚಲದ ಜನತೆ ಮತ್ತು ಬಿಜೆಪಿಯವರು ಬಯಸಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನಸೇವೆಗಾಗಿ ತಾವು ಸ್ಪರ್ಧಿಸುತ್ತೇನೆ ಎಂದಿದ್ದಾರೆ.

ಮಾಧ್ಯಮ ಸಂಸ್ಥೆಯೊಂದರ ಖಾಸಗಿ ಕಾರ್ಯಕ್ರಮವೊಂದರಲ್ಲಿ ಕಂಗನಾ ಈ ವಿಷಯಗಳನ್ನು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಂಗನಾ ರಾಣಾವತ್‌ಗೆ ಸಾರ್ವಜನಿಕರೊಬ್ಬರು ಪ್ರಶ್ನೆ ಕೇಳಿದ್ದರು. ಹಾಗೇನಾದರೂ ಅವಕಾಶ ಸಿಕ್ಕಲ್ಲಿ ಸಕ್ರಿಯ ರಾಜಕಾರಣಕ್ಕೆ ಹೋಗುವ ಆಸೆ ಇದೆಯೇ ಎಂದು ಕಂಗನಾಗೆ ಪ್ರಶ್ನೆ ಮಾಡಿದ್ದರು.

ಇದಕ್ಕೆ ಉತ್ತರಿಸಿದ ಅವರು, ರಾಜಕೀಯಕ್ಕೆ ಹೀಗುವ ವಿಚಾರದಲ್ಲಿ ನಾನು ಯಾವುದೇ ರೀತಿಯಲ್ಲಿ ಬಹಳ ಸನಿಹದಲ್ಲಿಲ್ಲ. ಹಾಗೇನಾದರೂ ನನಗ ಅವಕಾಶ ಸಿಕ್ಕಲ್ಲಿ, ಹಿಮಾಚಲ ಪ್ರದೇಶ ಹಾಗೂ ಬಿಜೆಪಿಯಿಂದ ಅವಕಾಶ ದೊರೆತಲ್ಲಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮಂಡಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ.

ಇನ್ನೂ ಅದೇ ಕಾರ್ಯಕ್ರಮದಲ್ಲಿ ಕಂಗನಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ “ಬಿಜೆಪಿ ಕಂಗನಾ ಅವರನ್ನು ಸ್ವಾಗತಿಸುತ್ತದೆ, ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರವನ್ನು ಸಮಾಲೋಚಿಸಿದ ನಂತರವೇ ತೆಗೆದುಕೊಳ್ಳಲಾಗುವುದು” ಎಂದು ನಡ್ಡಾ ಹೇಳಿದ್ದಾರೆ.

LEAVE A REPLY

Please enter your comment!
Please enter your name here