ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಎಚ್ಚರಕೆ ವಹಿಸುವಂತೆ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆ ಬಳಿಕ ಮಳೆಯಾಗುವ ಸಾಧ್ಯತೆ ಇದೆ.
|
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಚಿಕ್ಕಬಳ್ಳಾಪುರ ಚಿಕ್ಕಮಗಳೂರು ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿದಂತೆ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.