ರಾಜ್ಯಸಭಾ ಚುನಾವಣೆಗೆ ದೇವೇಗೌಡರ ಸ್ಪರ್ಧೆ – ಕಾಂಗ್ರೆಸ್ ಬೆಂಬಲ?

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಸ್ಪರ್ಧಿಸಲಿದ್ದಾರೆ.

ನಾಳೆ ದೇವೇಗೌಡರು ನಾಮಪತ್ರ ಸಲ್ಲಿಸದ್ದಾರೆ.

ಗೌಡರಿಗೆ ಕರೆ ಮಾಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ಪರ್ಧೆ ಮಾಡುವ ಗೌಡರ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಕಾಂಗ್ರೆಸ್ ರಾಜ್ಯಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾತ್ರ ಕಣಕ್ಕಿಳಿಸಿದೆ. ಹೀಗಾಗಿ ಕೈ ಪಾಳಯ ಗೌಡರನ್ನು ಬೆಂಬಲಿಸುವ ನಿರೀಕ್ಷೆ ಇದೆ.

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಆಗಿದ್ದ ದೇವೇಗೌಡರು ಮತ್ತು ಖರ್ಗೆ ಸೋಲು ಅನುಭವಿಸಿದ್ದರು. ಇಬ್ಬರೂ ರಾಜ್ಯಸಭೆ ಮೂಲಕ ಮತ್ತೆ ಸಂಸತ್ ಪ್ರವೇಶಿಸುವುದು ಬಹುತೇಕ ಪಕ್ಕಾ ಆಗಿದೆ.

LEAVE A REPLY

Please enter your comment!
Please enter your name here