ರಾಜ್ಯ ಕಾಂಗ್ರೆಸ್‍ನಲ್ಲಿ ಕಾರ್ಯಾಧ್ಯಕ್ಷ ಸ್ಥಾನ ಬೇಕು/ಬೇಡ ಕದನ

ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನ ಯಾರಿಗೆ ಎಂಬುದನ್ನು ಎಐಸಿಸಿ ಇನ್ನೂ ಅಂತಿಮ ನಿರ್ಧಾರ ಮಾಡಿಲ್ಲ. ಕೆಪಿಸಿಸಿ ಅಧ್ಯಕ್ಷರ ಅಂತಿಮಕ್ಕೆ ಕಾರ್ಯಾಧ್ಯಕ್ಷರ ನೇಮಕದ ವಿಚಾರ ಅಂತಿಮ ಆಗಬೇಕಿದೆ. ಆದರೆ, ಈ ವಿಚಾರದಲ್ಲಿ ಕಾಂಗ್ರೆಸ್ ಬಣಗಳ ನಡುವೆ ಇದೀಗ ಬಹಿರಂಗ ಕದನ ಶುರುವಾಗಿದೆ.

ಶನಿವಾರ ಮಾರನಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರು ಬೇಕು ಅಂತಾ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಜೊತೆಗೆ ವಿಪಕ್ಷ ನಾಯಕ ಸ್ಥಾನ ಮತ್ತು ಶಾಸಕಾಂಗ ಪಕ್ಷದ ನಾಯಕನ ಸ್ಥಾನವನ್ನು ಪ್ರತ್ಯೇಕಿಸುವುದು ಬೇಡ. ಎರಡೂ ಒಟ್ಟಿಗೆ ಇರಲಿ. ಅದು ಹಿಂದಿನಿಂದ ನಡೆದುಬಂದ ಸಂಪ್ರದಾಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಆದರೆ, ಇದಕ್ಕೆ ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರಂಗವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರಲ್ಲ, ಇಬ್ಬರು ಕಾರ್ಯಾಧ್ಯಕ್ಷರಲ್ಲ. ಒಬ್ಬರ ಅವಶ್ಯಕತೆಯೂ ಇಲ್ಲ. ಬೇಕಿದ್ದರೇ ಹಿರಿಯ ಉಪಾಧ್ಯಕ್ಷರನ್ನು ನೇಮಕ ಮಾಡಲಿ. ಆಗ ಹಿರಿತನದ ಪ್ರಶ್ನೆ ಬರೋದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಇದೇ ವೇಳೆ, ವಿಪಕ್ಷ ಮತ್ತು ಸಿಎಲ್‍ಪಿ ನಾಯಕನ ಸ್ಥಾನವನ್ನು ಪ್ರತ್ಯೇಕಿಸಬೇಕು. ಅಧಿಕಾರ ವಿಕೇಂದ್ರೀಕರಣವಾದರೆ ಏನು ಆಗಲ್ಲ. ಮಹಾರಾಷ್ಟ್ರದಲ್ಲಿ ಈಗಾಗಲೇ ಇದೇ ಮಾದರಿ ಅನುಸರಿಸಲಾಗಿದೆ. ರಾಜ್ಯದಲ್ಲಿ ಇದೇ ಮಾದರಿ ತಂದರೆ ತಪ್ಪೇನು ಎಂದು ಪ್ರಶ್ನೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here