ರಾಜ್ಯ ಸರ್ಕಾರ ಹಂಚಬೇಕಿದ್ದ ಆಹಾರ ಪದಾರ್ಥಗಳ ಪ್ಯಾಕೆಟ್‌ ಮೇಲೆ ಬಿಜೆಪಿ ಚಿಹ್ನೆ ಹಾಕಿ ಹಂಚಿಕೆ – ಕಾಂಗ್ರೆಸ್‌ ಆರೋಪ

ಆಹಾರ ಇಲಾಖೆಯಿಂದ ಪಡಿತರ ವ್ಯವಸ್ಥೆಯಲ್ಲಿ ಬಡವರಿಗೆ ಹಂಚಿಕೆ ಆಗಬೇಕಿದ್ದ ಆಹಾರ ಧಾನ್ಯಗಳನ್ನು ಅಕ್ರಮವಾಗಿ ಬಿಜೆಪಿ ನಾಯಕರು ತಮಿಳುನಾಡಿಗೆ ಕೊಂಡೊಯ್ದು ಮಾರಾಟ ಮಾಡುತ್ತಾರೆ ಎಂದು ಅರೋಪಿಸಿದ್ದ ಕಾಂಗ್ರೆಸ್‌ ಈಗ ಮತ್ತೊಂದು ಗಂಭೀರ ಆರೋಪ ಮಾಡಿದೆ.

ಬಡ ಮಕ್ಕಳಿಗೆ ಹಂಚಬೇಕಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೇರಿದ ಆಹಾರ ಪದಾರ್ಥಗಳಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಹಾಕಿ ಹಂಚಲಾಗುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಮಾಹಿತಿಯ ಮೇರೆಗೆ ಆನೇಕಲ್ ವಿಧಾನಸಭಾ ಕ್ಷೇತ್ರದ ಸರ್ಜಾಪುರದಲ್ಲಿ ಸಂಸದರಾದ ಡಿಕೆ ಸುರೇಶ್ ಮತ್ತು ಮಾಜಿ ಸಂಸದ ವಿ ಎಸ್‌ ಉಗ್ರಪ್ಪನವರ ನೇತೃತ್ವ ತಂಡ ದಾಳಿ ನಡೆಸ್ತು. ಈ ವೇಳೆ ಬಿಜೆಪಿ ಸರ್ಕಾರಕ್ಕೆ ಸಂಬಂಧಿಸಿದ ಆಹಾರ ಪದಾರ್ಥಗಳ ಮೇಲೆ ತನ್ನ ಪಕ್ಷದ ಚಿಹ್ನೆ ಹಾಕಿ ಹಂಚುತ್ತಿದ್ದಾರೆ ಎಂದು ಡಿಕೆ ಸುರೇಶ್‌ ಮತ್ತು ಉಗ್ರಪ್ಪ ಆರೋಪಿಸಿದರು.

LEAVE A REPLY

Please enter your comment!
Please enter your name here