ಕೋಟಿ ಕೋಟಿ ಭಾರತೀಯರ ಕನಸು ನನಸಾಗುವ ಸಮಯ ಬಂದಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆರಂಭಕ್ಕೆ ಸಂಬಂಧಿಸಿದ ದಿನಾಂಕಗಳನ್ನು ಅಖೈರು ಮಾಡಲಾಗಿದೆ. ಮಾರ್ಚ್ 25ರಿಂದ ಏಪ್ರಿಲ್ 2ರೊಳಗೆ ನಿರ್ಮಾಣ ಕಾಮಗಾರಿ ಆರಂಭಗೊಳ್ಳಲಿದೆ. ರಾಮಮಂದಿರ ನಿರ್ಮಾಣ ಸಮಿತಿಯಲ್ಲಿ 11 ಮಂದಿ ಇದ್ದು, ಅದರಲ್ಲಿ ವಿಹೆಚ್ಪಿ ಮುಖಂಡರಿಗೂ ಅವಕಾಶ ಕಲ್ಪಿಸಲಾಗಿದೆ.
ಭವ್ಯವಾದ ರಾಮಮಂದಿರ ನಿರ್ಮಾಣಕ್ಕೆ ಜನರಿಂದ ದೇಣಿಗೆ ಸಂಗ್ರಹಿಸಲು ತೀರ್ಮಾನಿಸಲಾಗಿದೆ. ಕೇವಲ ಸರ್ಕಾರಗಳು ಮಾತ್ರವಲ್ಲದೇ ಜನರ ಸಹಯೋಗದಲ್ಲಿ ಸಹ ರಾಮಮಂದಿರ ನಿರ್ಮಿಸಲು ನಿರ್ಧರಿಸಲಾಗಿದೆ. ಇದಕ್ಕೆ ಪ್ರತ್ಯೇಕ ಬ್ಯಾಂಕ್ ಖಾತೆಯನ್ನು ಶೀಘ್ರದಲ್ಲಿಯೇ ಓಪನ್ ಮಾಡಲಾಗುತ್ತದೆ.