ರಿಯಲ್ ಲೈಫ್ ಹೀರೋ ಸೋನು ಸೂದ್ ನಿಂದ ಮತ್ತೊಂದು ಸಾಮಾಜಿಕ ಕಾರ್ಯ

ಮುಂಬೈ : ಮಹಾರಾಷ್ಟ್ರದಲ್ಲಿ ಕೋವಿಡ್ ವೈರಸ್ ಆರ್ಭಟ ಆರಂಭವಾದಗಿನಿಂದ ಸಂಕಷ್ಟದಲ್ಲಿ ಸಿಲುಕಿರುವ ಜನರ ಬೆನ್ನಿಗೆ ನಿಂತಿರುವ ನಟ ಸೋನು ಸೂದ್ ಇನ್ನೂ ಹೆಚ್ಚೆಚ್ಚು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಲಾಕ್ ಡೌನ್ ವೇಳೆ ಮಹಾರಾಷ್ಟ್ರದಲ್ಲಿ ವಿವಿಧ ಕಡೆಗಳಲ್ಲಿ ಸಿಲುಕಿದ ವಲಸೆ ಕಾರ್ಮಿಕರನ್ನು, ನಿರ್ಗತಿಕರನ್ನು ಅವರ ಊರಿಗೆ ತಲುಪಿಸುವ ಕೆಲಸವನ್ನು ಮಾಡಿದ್ದ ಸಹೃದಯಿ ಇದೀಗ ಮತ್ತೊಮ್ಮೆ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.

ಈ ಸಂಕಷ್ಟದ ಸಮಯದಲ್ಲಿ ರಿಯಲ್ ಲೈಫ್ ಹೀರೋ ಆಗಿ ಗುರುತಿಸಿಕೊಂಡಿರುವ ಸೋನು ಇದೀಗ 25,000 ಫೇಸ್ ಶೀಲ್ಡ್ ಗಳನ್ನು ಮುಂಬೈ ಪೊಲೀಸ್ ಸಿಬ್ಬಂದಿಗಳಿಗೆ ವಿತರಣೆ ಮಾಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ.

ಈ ಸಾಮಾಜಿಕ ಕಾರ್ಯದ ಕುರಿತು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, 25,000 ಫೇಸ್ ಶೀಲ್ಡ್ ಗಳನ್ನು ಪೊಲೀಸರಿಗೆ ನೀಡಿದ್ದಕ್ಕೆ ಧನ್ಯವಾದಗಳು ಎಂದು ಪ್ರಸಂಶೆ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಕಾರ್ಮಿಕರಿಗೆ ವಿಶೇಷ ಬಸ್ ಗಳ ವ್ಯವಸ್ಥೆಯನ್ನು ಕೂಡ ಮಾಡಿದ್ದರು ಅದರ ಜೊತೆಗೆ ತಮ್ಮ ಐಶಾರಾಮಿ ಹೊಟೇಲನ್ನು ಕೋವಿಡ್ ವಿರುದ್ಧ ಹಗಲು ರಾತ್ರಿ ದುಡಿಯುತ್ತಿರುವ ವೈದ್ಯರಿಗೆ ಮತ್ತು ನರ್ಸ್ಗಳಿಗೆ ಬಿಟ್ಟುಕೊಟ್ಟಿದ್ದ ಸೋನು ಸೂದ್ ಅವರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿಯೂ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ.

LEAVE A REPLY

Please enter your comment!
Please enter your name here