ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಯನ್ನು ನಿರ್ಲಕ್ಷಿಸಿ ವೀಡಿಯೋಗೇಮ್ ಆಡುತ್ತಿದ್ದ ಕ್ಲಿನಿಕಲ್ಗೆ ನೇಮಿಸಿದ್ದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಯನ್ನು ಅಮಾನತುಗೊಳಿಸಲಾಗಿದೆ.
ವೈದ್ಯಕೀಯ ವಿದ್ಯಾರ್ಥಿ ವೀಡಿಯೋಗೇಮ್ ಆಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಇದೀಗ ಜಿಲ್ಲಾ ಸರ್ಜನ್ ವೈದ್ಯಕೀಯ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಿಲ್ಲಾ ಸರ್ಜನ್ ಡಾ.ಸದಾಶಿವಯ್ಯ, ವಿದ್ಯಾರ್ಥಿಯು ಜನವರಿ 24ರಂದು ವೆನ್ಲಾಕ್ ಆಸ್ಪತ್ರೆಯ ಕ್ಯಾಶುವಾಲಿಟಿ ಬ್ಲಾಕ್ನಲ್ಲಿ ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿಡಿಯೋ ಗೇಮ್ ಆಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯ ಕುರಿತು ತನಿಖೆ ನಡೆಸಿದಾಗ ಅವರು ನಿಜವಾಗಿಯೂ ವೀಡಿಯೊಗೇಮ್ ಆಡುತ್ತಿದ್ದರು ಎಂದು ಕಂಡುಬಂದಿದೆ. ನಂತರ ಅವರನ್ನು ಕಾಲೇಜ್ ನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.