ಸರ್ಕಾರಿ ಅಧಿಕಾರಿಯಿಂದ ಲಂಚಕ್ಕಾಗಿ ಬೇಡಿಕೆ ಇಟ್ಟಿದಲ್ಲದೇ, ಜೀವ ಬೆದರಿಕೆ ಒಡ್ಡಿರುವ ಗಂಭೀರ ಆರೋಪ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ಕೇಳಿಬಂದಿದೆ.

ಈ ಸಂಬಂಧ ಕಲ್ಬುರ್ಗಿ ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ್‌ ಸಂಗಾ ಅವರು ಕಲ್ಬುರ್ಗಿ ವಿಶ್ವವಿದ್ಯಾನಿಲಯ ಠಾಣೆಗೆ ದೂರು ನೀಡಿದ್ದಾರೆ. ಕಲ್ಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಅವರ ಬೆಂಬಲಿಗರಾದ ಪಾಲಿಕೆ ಕಾರ್ಪೋರೇಟರ್ ಪ್ರಭು ಹಾದಿಮನಿ ಮತ್ತು ಚಂದ್ರಕಾಂತ ಎಂಬವರ ವಿರುದ್ಧ ದೂರು ನೀಡಲಾಗಿದೆ.‌

ಈ ಸಂಬಂಧ ಟ್ವೀಟಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ

ಕಲಬುರಗಿಯ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ರಮೇಶ್ ಸಂಗ ಅವರಿಗೆ ವರ್ಗಾವಣೆಯ ಬೆದರಿಕೆಯೊಡ್ಡಿ ಹಣಕ್ಕಾಗಿ ಪೀಡಿಸಿದ ಶಾಸಕ ದತ್ತಾತ್ರೇಯ ರೇವೂರ ವಿರುದ್ಧ ತಕ್ಷಣ ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು. ಈ ಬಗ್ಗೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮಿಷನರ್‌ಗೆ ಮಾತನಾಡಿದ್ದೇನೆ.

ಶಾಸಕ ದತ್ತಾತ್ರೇಯ ಅವರು ತಾನು ಬೆದರಿಕೆಯೊಡ್ಡಿದ್ದು ಮಾತ್ರವಲ್ಲ ಹಾದಿಮನಿ ಎಂಬ ಕಾರ್ಪೋರೇಟರ್‌ನಿಂದಲೂ ಬೆದರಿಕೆ ಹಾಕಿಸಿದ್ದಾರೆ. ಇದು ಭ್ರಷ್ಟಾಚಾರ ಎಸಗಿದ ಮತ್ತು ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಗಂಭೀರ ಆರೋಪವಾಗಿದೆ. ಈ ಬಗ್ಗೆ ಅಧಿಕಾರಿ ರಮೇಶ್ ಸಂಗ ನೀಡುವ ದೂರನ್ನು ದಾಖಲಿಸಿ ಕ್ರಮಕೈಗೊಳ್ಳಬೇಕು

ಎಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here