ಲೈಂಗಿಕ ಆರೋಪದ ಪ್ರಕರಣದಲ್ಲಿ ಶ್ರೀಗಳನ್ನು ರಕ್ಷಿಸಲಾಗುತ್ತಿದೆ ಎಂದು ರಾಜ್ಯಪಾಲರಿಗೆ ದೂರು

Shivamurthy Murugha Sharanaru
Dr.Shivamurthy Murugha Sharanaru

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಪ್ರಕರಣದ ಆರೋಪಿ ಚಿತ್ರದುರ್ಗದ ಮುರುಘಾ ಶರಣರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ, ಪೊಲೀಸ್ ಮಹಾನಿರ್ದೇಶಕರು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ ಮಾನವ ಹಕ್ಕುಗಳ ಹೋರಾಟ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಅಧ್ಯಕ್ಷ ಎಸ್.ಆರ್​.ರಾಘವೇಂದ್ರ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಪ್ರಕರಣದಲ್ಲಿ ಗೃಹ ಸಚಿವರು ಮತ್ತು ಗೃಹ ಇಲಾಖೆ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಆರೋಪಿ ಸ್ವಾಮೀಜಿ ಬಂಧಿಸುವಂತೆ ಗೃಹಸಚಿವರು ಸೂಚಿಸಬೇಕಿತ್ತು. ಆದರೆ, ದೂರಿನ ಹಿಂದೆ ಪಿತೂರಿ ಇದೆ ಎಂದು ಹೇಳಿಕೆ ನೀಡಿದ್ದಾರೆ. ಇವರ ಅಧೀನದ ಪೊಲೀಸರ ತನಿಖೆಯಿಂದ ನ್ಯಾಯ ದೊರಕುವ ವಿಶ್ವಾಸವಿಲ್ಲ ಎಂದಿದ್ದಾರೆ.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತನಿಖೆ ಉಸ್ತುವಾರಿ ಇರಬೇಕು. ದೇಶದ ಉನ್ನತ ತನಿಖಾ ಸಂಸ್ಥೆಗಳಿಗೆ ಪ್ರಕರಣ ವರ್ಗಾಯಿಸಬೇಕು ಎಂದು ಎಸ್​​.ಆರ್.ರಾಘವೇಂದ್ರ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here