ಲೋಕಸಭೆ ವಿಶೇಷ ಅಧಿವೇಶನ ಕರೆಯುವಂತೆ ರಾಷ್ಟ್ರಪತಿಗಳಿಗೆ ಪತ್ರ.

ದೇಶದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ಹೆಚ್ಚಿನ ಮಟ್ಟದ ಪರಿಣಾಮ ಬೀರುತ್ತಿದೆ. ಈ ಕೊರೋನಾ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ಕಾಂಗ್ರೆಸ್​ ಪಕ್ಷದ ಲೋಕಸಭಾ ಸದಸ್ಯ ಅಧೀರ್ ರಂಜನ್ ಚೌದ್ರಿ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.

ಪಶ್ಚಿಮ ಬಂಗಾಳದ ಲೋಕಸಭಾ ಸದಸ್ಯ ಅಧೀರ್ ರಂಜನ್ ಚೌದ್ರಿ ಅವರು ಪತ್ರದಲ್ಲಿ,  ಭಾರತದಲ್ಲಿ ಪ್ರಸ್ತುತ ಕೊರೋನಾ ರೋಗದಿಂದ ಸಾಕಷ್ಟು ಸಮಸ್ಯೆಗಳು ಸೃಷ್ಠಿಯಾಗಿವೆ. ಈ ಕೊರೋನಾ ಬಿಕ್ಕಟ್ಟನ್ನು ನಿವಾರಿಸುವ ಬಗ್ಗೆ ರಾಷ್ಟ್ರಪತಿಗಳಾದ ನೀವು ಲೋಕಸಭೆಯ ವಿಶೇಷ ಅಧಿವೇಶನ ಕರೆಯಬೇಕಿದೆ. ಆ ಮೂಲಕ ಕೊರೋನಾ ರೋಗದ ನಿವಾರಣೆಯ ಬಗ್ಗೆ ವಿಚಾರ ಮಾಡಬೇಕಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here