ವಿದ್ಯುತ್‌ ಬಿಲ್‌ ಪಾವತಿ ಗೊಂದಲ : ಮೆಸ್ಕಾಂ ಅಧಿಕಾರಿಗಳ ಜೊತೆ ಉಡುಪಿ ಶಾಸಕ ರಘುಪತಿ ಭಟ್‌ ಚರ್ಚೆ

ಲಾಕ್ ಡೌನ್ ಸಂದರ್ಭದಲ್ಲಿ ವಿದ್ಯುತ್ ಬಳಕೆಯ ನಿಗದಿತ ಶುಲ್ಕದಲ್ಲಿ ಬಳಕೆದಾರರಲ್ಲಿ ಇರುವ ಗೊಂದಲದ ಬಗ್ಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಘುಪತಿ ಭಟ್ ಅವರು ಮೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮೆಸ್ಕಾಂ ಅಧಿಕಾರಿಗಳು ಡಿಸೆಂಬರ್, ಜನವರಿ, ಫೆಬ್ರವರಿ ತಿಂಗಳ ಸರಾಸರಿ ಬಳಕೆಯ ಆಧಾರದ ಮೇಲೆ ಮೇ ತಿಂಗಳಿನಲ್ಲಿ ವಿದ್ಯುತ್  ಬಿಲ್ಲನ್ನು ತಂತ್ರಾಂಶದ ಮೂಲಕ ನೀಡಿದ್ದು, ಹಾಗೂ ಗ್ರಾಮಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವರ್ಗೀಕರಣದ ಆಧಾರದ ಮೇಲೆ ತಿಂಗಳ ಅನುಸೂಚಿಯ ದರದ ಮೇಲೆ ಶುಲ್ಕವನ್ನು ವಿಧಿಸಿರುವುದಾಗಿ ತಿಳಿಸಿರುತ್ತಾರೆ.

ನಿಗದಿತ ಅವಧಿಯಲ್ಲಿ ಪಾವತಿಸದೇ ಇರುವವರಿಗೆ ಶೇಕಡ ಒಂದರಷ್ಟು ಬಡ್ಡಿದರವನ್ನು ವಿಧಿಸಲಾಗಿದ್ದು. ನಿಗದಿತ ಅವಧಿಯಲ್ಲಿ ಶುಲ್ಕವನ್ನು ಪಾವತಿ ಮಾಡಿದವರಿಗೆ ಹೆಚ್ಚುವರಿಯಾಗಿ ಬಡ್ಡಿಯನ್ನು ವಿಧಿಸುವುದಿಲ್ಲ.

ವಿದ್ಯುತ್ತನ್ನು ಕಡಿಮೆ ಬಳಕೆ ಮಾಡಿ ಸರಾಸರಿ ಬಳಕೆಯ ಆಧಾರದ ಮೇಲೆ ಹೆಚ್ಚಿನ ವಿದ್ಯುತ್ ಬಳಕೆ ಶುಲ್ಕವನ್ನು ವಿಧಿಸಿ ಮುಂದಿನ ತಿಂಗಳು ಮಾಡುವಂತೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್ ವಿದ್ಯುತ್ ಬಳಕೆಯ ಶುಲ್ಕದ ಬಳಕೆದಾರರಿಗೆ ಇರುವ ಗೊಂದಲವನ್ನು ಮನದಟ್ಟು ಮಾಡುವಂತೆ ಮೆಸ್ಕಾಂ ಅಧಿಕಾರಿಗಳಲ್ಲಿ ಹಾಗೂ ಲೆಕ್ಕ ಸಹಾಯಕರಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಮೆಸ್ಕಾಂನ ಅಧೀಕ್ಷಕ ಇಂಜಿನಿಯರ್ ನರಸಿಂಹ ಪಂಡಿತ್, ಕಾರ್ಯನಿರ್ವಾಹಕ ಅಭಿಯಂತರಾದ ದಿನೇಶ್ ಉಪಾಧ್ಯ ಹಾಗೂ ಅಧಿಕಾರಿಗಳು ಮೆಸ್ಕಾಂನ ಹಿರಿಯ ಲೆಕ್ಕಾಧಿಕಾರಿ ಮತ್ತು ಸಹಾಯಕ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here