ವಿಧಾನಸಭೆ ಸಭಾಪತಿ ವಿಶ್ವೇಶ್ವರ್ ಹೆಗಡೆ ಕಾಗೇರಿಗೆ ಕೊರೋನಾ ಸೋಂಕು ದೃಢ.

ವಿಧಾನಸಭೆ ಸಭಾಪತಿ ವಿಶ್ವೇಶ್ವರ್ ಹೆಗಡೆ ಕಾಗೇರಿ ಕೊರೋನಾ ಸೋಂಕು ದೃಢಪಟ್ಟಿದೆ.

ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ಶಿರಸಿಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇಂದು ಬಂದ ವರದಿಯಲ್ಲಿ ಕೊರೋನಾ ಸೋಂಕು ದೃಡವಾಗಿದೆ. ಕಾಗೇರಿ ಅವರಿಗೆ ಯಾವುದೇ ರೀತಿಯ ಲಕ್ಷಣಗಳು ಇರಲಿಲ್ಲ. ಪ್ರಸ್ತುತ ಸಭಾಪತಿಗಳ ಆರೋಗ್ಯ ಸ್ಥಿರವಾಗಿದೆ.
ಕಾಗೇರಿಯವರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದು, ಇತ್ತೀಚಿಗೆ ಸಭಾಧ್ಯಕ್ಷರ ಸಂಪರ್ಕಕ್ಕೆ ಬಂದವರು ಸ್ವಯಂ ಪ್ರೇರಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ವಿಧಾನಸಭಾ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here