ರಾಜ್ಯ ವಿಧಾನ ಪರಿಷತ್ ನ ಸಭಾಪತಿಯಾದ ಬಸವರಾಜ್ ಹೊರಟ್ಟಿಯವರಿಗೆ ಕೊರೋನಾ ಸೋಂಕು ದೃಢವಾಗಿದೆ.
ಸೋಮವಾರ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದ ಬಸವರಾಜ ಹೊರಟ್ಟಿ ಅವರು ಕೋವಿಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು.
ವರದಿಯಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಬಸವರಾಜ ಹೊರಟ್ಟಿಯವರು ವೈದ್ಯರ ಸಲಹೆ ಮೇರೆಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.