ವಿಪಕ್ಷಗಳ ಆಗ್ರಹಕ್ಕೆ ಎಚ್ಚೆತ್ತ ಸರ್ಕಾರ: ವಲಸೆ ಕಾರ್ಮಿಕರಿಗೆ 3 ದಿನ ಉಚಿತ ಕೆಎಸ್‌ಆರ್‌ಟಿಸಿ ಬಸ್ ಸೇವೆ

ಲಾಕ್‌ಡೌನ್ ನಿಂದ ತಮ್ಮ ಊರುಗಳಿಗೆ ತೆರಳಲಾಗದೇ ಬೆಂಗಳೂರಿನ ವಿವಿಧೆಡೆ ತೊಂದರೆಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಅವರವರ ಊರಿಗೆ ಕಳಿಸಲು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ‌.

ದುಬಾರಿ ಬಸ್ ದರದಿಂದಾಗಿ ಕೆಲಸವಿಲ್ಲದ ಕೂಲಿ ಕಾರ್ಮಿಕರು ಪರದಾಡುವಂತಾಗಿತ್ತು. ಇನ್ನು ನಿನ್ನೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಮೆಜೆಸ್ಟಿಕ್ ಗೆ ಹೋಗಿ ಅಲ್ಲಿದ್ದ ವಲಸೆ ಕಾರ್ಮಿಕರ ಜೊತೆ ಮಾತನಾಡಿದ್ದರು.

ವಲಸೆ ಕಾರ್ಮಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ ಎಂದು ಶನಿವಾರ ವಿಪಕ್ಷಗಳು ಹಾರಿಹಾಯ್ದಿದ್ದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಇದೀಗ ವಲಸೆ ಕಾರ್ಮಿಕರಿಗಾಗಿ ಉಚಿತವಾಗಿ 3 ದಿನಗಳ ಕಾಲ ಕೆಎಸ್ಆರ್ಟಿಸಿ ಬಸ್ ಓಡಿಸಲು ಅವಕಾಶ ಮಾಡಿಕೊಟ್ಟಿದೆ.

ಅಲ್ಲದೆ ಕಾರ್ಮಿಕರಿಗೆ ಉಚಿತವಾಗಿ ಊಟದ ವ್ಯವಸ್ಥೆಯನ್ನು ಮಾಡುತ್ತಿದೆ. ಇದೇ ವೇಳೆ ಕಾರ್ಮಿಕರ ಆರೋಗ್ಯವನ್ನು ತಪಾಸಣೆ ನಡೆಸಿ ಅವರ ಊರುಗಳಿಗೆ ಕಳುಹಿಸಿಕೊಡಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here