ವೆಂಟಿಲೇಟರ್ ಖರೀದಿಯಲ್ಲಿ ಹಗರಣ.. ಸಂಸದ ಪ್ರಜ್ವಲ್ ರೇವಣ್ಣ ಆರೋಪ

ಕೊರೊನಾ ನಿಯಂತ್ರಣದ ಹೆಸರಿನಲ್ಲಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಭಾರಿ ಲೂಟಿ ಮಾಡುತ್ತಿದೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ.

ಹಾಸನದ ಅರಕಲಗೂಡಿನಲ್ಲಿ ಮಾತನಾಡಿದ ಅವರು, ಸರ್ಕಾರ ಒಂದೊಂದು ವೆಂಟಿಲೇಟರ್ ಗೆ 8.5 ಲಕ್ಷ ರೂಪಾಯಿ ಬಿಲ್ ತೋರಿಸಿದೆ. ನಾವು ಅದೇ ವೆಂಟಿಲೇಟರನ್ನು ಕೇವಲ 2.5 ಲಕ್ಷ ರೂಪಾಯಿಗೆ ಸಂಸದರ ನಿಧಿಯಿಂದ ಖರೀದಿಸಿ, ಸಕಲೇಶಪುರ ಆಸ್ಪತ್ರೆಗೆ ನೀಡಿದ್ದೇವೆ ಎಂದರು.

ರಾಜ್ಯ ಸರ್ಕಾರ ವೆಂಟಿಲೇಟರ್ ಹೆಸರಲ್ಲಿ 40 ಕೋಟಿಗೂ ಹೆಚ್ಚು ಅವ್ಯವಹಾರ ನಡೆಸಿದೆ. ಇದರ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಪ್ರಜ್ವಲ್ ರೇವಣ್ಣ ಆಗ್ರಹಿಸಿದ್ದಾರೆ. ಸಾರ್ವಜನಿಕರ ಹಣ ದುರುಪಯೋಗ ಆಗೋದನ್ನು ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here