ಸಚಿವ ಸಂಪುಟ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ನಡೆಸಿದ ಸಭೆಯ ಮುಖ್ಯಾಂಶಗಳು

ನಾಲ್ಕನೇ ಹಂತದ ಲಾಕ್ ಡೌನ್ ಅನುಷ್ಠಾನ ಕುರಿತಂತೆ ಮುಖ್ಯಮಂತ್ರಿಗಳು ದಿನಾಂಕ 18-5-2020 ರಂದು ನಡೆಸಿದ ಸಭೆಯ ಮುಖ್ಯಾಂಶಗಳು

1. ಲಾಕ್ ಡೌನ್ 4ನೇ ಹಂತದಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಹಿನ್ನೆಲೆಯಲ್ಲಿ ಯಾವ ಯಾವ ಚಟುವಟಿಕೆಗಳಿಗೆ ಅನುಮತಿ ನೀಡಬೇಕು, ನೀಡಬಾರದು ಎಂಬ ಕುರಿತು ಇಂದು ಸಚಿವ ಸಂಪುಟದ ಸದಸ್ಯರು ಮತ್ತು ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು.

2. ಕೋವಿಡ್ 19 ಸೋಂಕು ನಿಯಂತ್ರಿಸುವ ಜೊತೆಗೆ ಅನುಮತಿಸಿರುವ ಚಟುವಟಿಕೆಗಳನ್ನು ನಿರ್ವಹಿಸುವ ಬಗ್ಗೆ, ಹೊರ ರಾಜ್ಯದಿಂದ, ಹೊರ ದೇಶಗಳಿಂದ ರಾಜ್ಯಕ್ಕೆ ಹಿಂತಿರುಗುವ ಜನರಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡುವ ಬಗ್ಗೆ, ಸಾರ್ವಜನಿಕರ ಸಾರಿಗೆ ಪ್ರಾರಂಭಿಸುವ ಬಗ್ಗೆ, ಕಾನೂನು ಸುವ್ಯವಸ್ಥೆ ಕುರಿತು ಚರ್ಚಿಸಲಾಯಿತು.

3. ಕಂಟೇನ್ ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲನೆ ಮಾಡಲಾಗುವುದು. ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

4. ಕಂಟೇನ್ ಮೆಂಟ್ ಝೋನ್ ಹೊರತು ಪಡಿಸಿ ಇತರ ಸ್ಥಳಗಳಲ್ಲಿ ಎಲ್ಲ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಗಳ ಓಡಾಟಕ್ಕೆ ಅನುಮತಿ ನೀಡಲಾಗುವುದು. ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ.

5. ಹೊರ ರಾಜ್ಯದ ಜನರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು. ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರ ಅವರಿಗೆ ಪ್ರವೇಶ ನೀಡಲಾಗುವುದು.

6. ಟ್ಯಾಕ್ಸಿ ಯಲ್ಲಿ ಚಾಲಕರೊಂದಿಗೆ ಇಬ್ಬರು, ಮ್ಯಾಕ್ಸಿ ಕ್ಯಾಬ್ ನಲ್ಲಿ ಮೂರು ಜನ ಮತ್ತು ಚಾಲಕರು ಪ್ರಯಾಣಿಸಬಬಹುದು.

7. ಭಾನುವಾರ ಸಂಪೂರ್ಣ ಲಾಕ್ ಡೌನ್ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು.

8. ಹೋಮ್ ಕ್ವಾರಂಟೈನ್ ಗೆ ಆದ್ಯತೆ ನೀಡಲು ತೀರ್ಮಾನಿಸಲಾಯಿತು.

9. ಉದ್ಯಾನವನಗಳಲ್ಲಿ ಬೆಳಿಗ್ಗೆ 7 ರಿಂದ 9 ಗಂಟೆ ಹಾಗೂ ಸಂಜೆ 5 ರಿಂದ 7 ರವರೆಗೆ ತೆರೆಯಬಹುದು.

LEAVE A REPLY

Please enter your comment!
Please enter your name here