ಸರ್ಕಾರಿ ಉದ್ಯೋಗಿಗಳಿಗೆ ಬಿಎಸ್‍ವೈ ಸರ್ಕಾರದಿಂದ ಗುಡ್ ನ್ಯೂಸ್

ಕೊರೋನಾ ಹೊಡೆದೋಡಿಸುವ ಸಲುವಾಗಿ ಇಡೀ ದೇಶವನ್ನು ಲಾಕ್‍ಡೌನ್ ಮಾಡಲಾಗಿದೆ. ಎಲ್ಲಾ ರೀತಿಯ ವಾಣಿಜ್ಯ ವ್ಯವಹಾರ,
ಕಂಪನಿ, ಕಾರ್ಖಾನೆಗಳು ಸ್ತಬ್ಧವಾಗಿವೆ. ಆರ್ಥಿಕ ಬಿಕ್ಕಟ್ಟು ಎದುರಾಗಿದೆ. ಆರ್ಥಿಕ ಬಿಕ್ಕಟ್ಟನ್ನು ಸರಿದೂಗಿಸಲು ಪಕ್ಕದ ರಾಜ್ಯಗಳಾದ
ತೆಲಂಗಾಣ, ಆಂಧ್ರಪ್ರದೇಶದಲ್ಲಿ ಸರ್ಕಾರಿ ನೌಕರರ ವೇತನದಲ್ಲಿ ಶೇಕಡಾ 75ರವರೆಗೂ ತಾತ್ಕಾಲಿಕವಾಗಿ ಕಡಿತ ಮಾಡಲಾಗಿದೆ.

ರಾಜ್ಯದಲ್ಲಿಯೂ ಹೀಗೆ ಮಾಡಬಹುದು ಎಂಬ ಸುದ್ದಿ ಹರಡಿತ್ತು. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿಯೂ ಚರ್ಚೆ ನಡೆದಿತ್ತು. ಆದರೆ,
ಇದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿಲ್ಲ. ಎಷ್ಟೇ ಕಷ್ಟವಾದರೂ ಸರಿ ಸರ್ಕಾರಿ ನೌಕರರ ವೇತನ ಕಡಿತ ಮಾಡಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಕೇವಲ ಸರ್ಕಾರಿ ನೌಕರರಷ್ಟೇ ಅಲ್ಲ. ಖಾಸಗಿ ಕಂಪನಿಗಳ ನೌಕರರು, ಮನೆ ಕೆಲಸದವರು, ಕಾರು ಚಾಲಕರು, ಸಹಾಯಕರ
ವೇತನ ಕಡಿತ ಮಾಡಬೇಡಿ ಎಂದು ಮುಖ್ಯಮಂತ್ರಿಗಳು ಟ್ವಿಟ್ಟರ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಇಂತಹ ಸಂಕಷ್ಟದ
ಸಮಯದಲ್ಲಿ ನಾವು ಬಡವರ ಬೆಂಬಲಕ್ಕೆ ನಿಲ್ಲಬೇಕಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here