ಮುಸ್ಲಿಮರ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಬೇಡ- ಮುಖ್ಯಮಂತ್ರಿಗೆ ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಪತ್ರ

ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಬೆನ್ನಲ್ಲೇ ಶಾಸಕ ಎನ್.ಎ.ಹ್ಯಾರಿಸ್ ರಂಜಾನ್ ನಿಮಿತ್ತ ಪರಿಸ್ಥಿತಿ ಅನುಕೂಲವಾಗಿದ್ದರೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು .

ಆದರೆ ಇದೀಗ ರಂಜಾನ್ ನಮಾಝ್ ಮನೆಯಲ್ಲೇ ಮಾಡಲು ಮುಸ್ಲಿಂ ಸಮುದಾಯದವರು ಒಪ್ಪಿರುವುದರಿಂದ ಮುಖ್ಯಮಂತ್ರಿಗೆ ಶಾಸಕ ಎನ್.ಎ.ಹ್ಯಾರಿಸ್ ಎರಡನೇ ಪತ್ರ ಬರೆದಿದ್ದು, ಈ ಪತ್ರದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಬೇಡ,  ರಂಝಾನ್‌ ಹಬ್ಬದ ವಿಶೇಷ ಪ್ರಾರ್ಥನೆಯನ್ನು ಈ ಬಾರಿ ಮನೆಯಲ್ಲಿಯೇ ನಿರ್ವಹಿಸುತ್ತಿರುವುದಾಗಿಯೂ, ರಾಜ್ಯದ ಮುಸ್ಲಿಂ ಬಾಂಧವರು ಸರ್ಕಾರದ ಈ ನಿರ್ಧಾರಕ್ಕೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದು,  ಲಾಕ್ ಡೌನ್ 15 ದಿನ ಮುಂದುವರಿಸುವಂತೆ ಮನವಿ ಮಾಡಿದ್ದಾರೆ.

 

LEAVE A REPLY

Please enter your comment!
Please enter your name here