ಸೌಹಾರ್ದತೆ ಎಂದರೆ ಬಿಜೆಪಿಗೆ ಏಕಿಷ್ಟು ಭಯ? – ಸಿದ್ದರಾಮಯ್ಯ ಪ್ರಶ್ನೆ

ಮಹಾತ್ಮಗಾಂಧಿಯವರನ್ನು ಸಂಘ ಪರಿವಾರ ಗುಂಡಿಟ್ಟು ಕೊಂದಿತ್ತು. ಈಗ ಅದೇ ಸಂಘಟನೆಗೆ ಸೇರಿದ ಗೂಂಡಾ ಜಾಮಿಯಾ ವಿವಿ ಬಳಿ ಗುಂಡು ಹಾರಿಸಿದ್ದಾನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈಶ್ವರ್ ಅಲ್ಲಾ ತೇರೆ ನಾಮ್ ಸಬ್‌ಕೋ ಸನ್ಮತಿ ದೇ ಭಗವಾನ್’ ಎಂದು ಸೌಹಾರ್ದತೆ ಸಾರಿದ ಕಾರಣಕ್ಕಾಗಿ ಮಹಾತ್ಮ ಗಾಂಧಿಯವರನ್ನು ಸಂಘಪರಿವಾರ ಗುಂಡಿಟ್ಟು ಕೊಂದಿತ್ತು. ಈಗ ಅದೇ ಸಂಘಟನೆಗೆ ಸೇರಿದ ಗೂಂಡಾ ಒಬ್ಬ ಜಾಮಿಯಾ ವಿಶ್ವವಿದ್ಯಾಲಯದ ಮೌನ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾನೆ. ಸೌಹಾರ್ದತೆ ಎಂದರೆ ಬಿಜೆಪಿಗೆ ಏಕಿಷ್ಟು ಭಯ?

ಮಹಾತ್ಮ ಗಾಂಧಿಯವರ ಸಮಾಧಿಸ್ಥಳ ರಾಜ್‌ಘಾಟ್‌ಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಕಣ್ಣೆದುರೇ ಗೂಂಡಾ ಒಬ್ಬ ಗುಂಡು ಹಾರಿಸಿದ್ರೂ ಪೊಲೀಸರು ಮೌನವಾಗಿದ್ರು. ಗೂಂಡಾವೊಬ್ಬನಿಗೆ ಇಷ್ಟು ಧೈರ್ಯ ಬರಲು ಹೇಗೆ ಸಾಧ್ಯ? ಇದಕ್ಕೆ ಯಾರ ಬೆಂಬಲವಿದೆ? ಎಂಬುದರ ಬಗ್ಗೆ ಮೊದಲು ತನಿಖೆಯಾಗಬೇಕು.

ದೇಶ ವಿನಾಶದತ್ತ ಸಾಗುತ್ತಿದೆ. ಸಮಾಜಘಾತುಕರು, ಗೂಂಡಾಗಳೆಲ್ಲ ದೇಶಪ್ರೇಮದ ಸೋಗಿನಲ್ಲಿ ಅಮಾಯಕರ ಹತ್ಯೆಗೆ ನಿಂತಿದ್ದಾರೆ. ಇಂಥ ಹತ್ಯೆಗಳಿಗೆ ಸರ್ಕಾರವೂ ಬೆಂಬಲಿಸುತ್ತಿರುವುದು ದೇಶದ ಕರಾಳ ದಿನಗಳನ್ನು ಖಾತ್ರಿಪಡಿಸುತ್ತಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಪುರಾವೆ ಬೇಕೆ? ಎಂದು ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here