ಸ್ವರ್ಗ ಸೃಷ್ಟಿಸ್ತೇವೆ ಎಂದು ಹೇಳಿ ದೇಶವನ್ನು ನರಕ ಮಾಡಿದ್ರು – ಬಿಜೆಪಿಗೆ ಗುಮ್ಮಿದ ಟಗರು

ಸ್ವರ್ಗ ಮಾಡ್ತೀವಿ ಎಂದು ಹೇಳಿ ಬಿಜೆಪಿಯವರು ದೇಶವನ್ನು ನರಕ ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಮಾತಾಡಿದ ಅವರು ಕಳೆದ ಬಾರಿ ಕೇಂದ್ರದ ಬಜೆಟ್ ಗಾತ್ರ ರೂ.27 ಲಕ್ಷ ಕೋಟಿಯಾಗಿತ್ತು, ಅದರಲ್ಲಿ ಎಷ್ಟು ಹಣ ಬಿಡುಗಡೆಯಾಗಿದೆ, ಎಷ್ಟು ಹಣ ಖರ್ಚಾಗಿದೆ ಎಂಬುದು ನಾಳೆ ತಿಳಿಯುತ್ತೆ. 6 ವರ್ಷದಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ, ಪ್ರಧಾನಿ ಮೋದಿಯವರು ನೀಡಿದ ಭರವಸೆ ಎಲ್ಲವೂ ಈಡೇರಿದ್ದರೆ ಈಗಾಗಲೇ ಸ್ವರ್ಗ ಸೃಷ್ಟಿಯಾಗಿರಬೇಕಿತ್ತು ಎಂದರು.

ಬಿಜೆಪಿಯವರು ಸ್ವರ್ಗ ಸೃಷ್ಟಿ ಮಾಡ್ತೀವಿ ಅಂತ ಹೇಳಿ ದೇಶವನ್ನು ನರಕ ಮಾಡಿದ್ದಾರೆ. ದೇಶದ ನಿರುದ್ಯೋಗ ಸಮಸ್ಯೆ, ಹಸಿವು, ಜಿಡಿಪಿ ಕುಸಿತ, ಭ್ರಷ್ಟಾಚಾರದ ಹೆಚ್ಚಳ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಉತ್ಪಾದನೆ ಕುಸಿತ, ಇಳಿಕೆಯಾಗುತ್ತಿರುವ ರಫ್ತು ಪ್ರಮಾಣದ ಬಗ್ಗೆ ಮಾತನಾಡಲಿ. ದೇಶದ ಈ ದುಸ್ಥಿತಿಗೆ ಕಾರಣ ಯಾರು ಎಂದು ಪ್ರಶ್ನಿಸಿದರು.

LEAVE A REPLY

Please enter your comment!
Please enter your name here