ʼಧ್ವನಿʼ ನಿಲ್ಲಿಸಿದ ಹೋರಾಟಗಾರ, ವಾಗ್ಮಿ ಮಹೇಂದ್ರ ಕುಮಾರ್‌

ಪ್ರಗತಿಪರ ಚಿಂತಕ, ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್‌ ಇಂದು ಮುಂಜಾನೆ ಹೃದಯಾಘಾತದಿಂದ ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾದರು.

ಶುಕ್ರವಾರ ರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ಅವರು ಅದರಿಂದ ಹೊರಬಂದ ಬಳಿಕ ಸಂಘ ಪರಿವಾರದ ಟೀಕಾಕಾರರಾಗಿ ಸಾಮಾಜಿಕ ಜಾಗೃತಿ ಚಟುವಟಿಕೆಯಲ್ಲಿ ಸಕ್ರೀಯರಾಗಿದ್ದರು. ಬಿಜೆಪಿ, ಸಂಘ ಪರಿವಾರದ ಸಿದ್ಧಾಂತ ವಿರೋಧಿಸಿ ಸಾಕಷ್ಟು ನಿಷ್ಠುರಗಳನ್ನೂ ಕಟ್ಟಿಕೊಂಡಿದ್ದರು.‌

ಇತ್ತೀಚೆಗೆ ನಮ್ಮ ಧ್ವನಿ ಎಂಬ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದ ಅವರು ಈ ಚಾನೆಲ್ ಮೂಲಕ ಕೇಂದ್ರ ಸರ್ಕಾರದ ಇಬ್ಬಗೆಯ ನೀತಿ, ಸಿಎಎ, ಎನ್‌ಆರ್‌ಸಿ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಅನೇಕ ನಡೆಗಳನ್ನು ಉಗ್ರವಾಗಿ ಟೀಕಿಸಿದ್ದರು.

ಮೂಲತಃ ಚಿಕ್ಕಮಗಳೂರಿನ ಕೊಪ್ಪದವರಾದ ಮಹೇಂದ್ರ ಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಇನ್ನು ಮಹೇಂದ್ರ ಕುಮಾರ್‌ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂತಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here