ನಟ, ನಿರ್ದೇಶಕ ರಿಷಬ್ ಶೆಟ್ಟಿ ಎರಡನೇ ಮಗುವಿನ ತಂದೆಯಾದ ಸಂಭ್ರಮದಲ್ಲಿದ್ದಾರೆ. ರಿಷಬ್ ಪತ್ನಿ ಪ್ರಗತಿ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಕುರಿತು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಪತ್ನಿ ಜತೆಗಿನ ಫೋಟೋ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದು, ಇಷ್ಟೇ ಚಂದದ ಮಗಳು ಹುಟ್ಟಿದ್ದಾಳೆ ಎಂದು ಹೇಳಿದ್ದಾರೆ. ತಾಯಿ ಹಾಗೂ ಮಗು ಆರೋಗ್ಯದಿಂದ ಇದ್ದಾರೆ ಎಂದು ರಿಷಬ್ ತಿಳಿಸಿದ್ದಾರೆ.
ಇಷ್ಟೇ ಚಂದದ ಮಗಳು ಹುಟ್ಟಿದ್ದಾಳೆ 😍 ತಾಯಿ ಮಗು ಆರೋಗ್ಯವಾಗಿದ್ದಾರೆ 🙏😍 pic.twitter.com/gvEtOJeRiX
— Rishab Shetty (@shetty_rishab) March 4, 2022
ಎರಡನೇ ಮಗುವಿನ ಆಗಮನದ ಸಂಭ್ರಮದಲ್ಲಿರುವ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿಗೆ ಸ್ಯಾಂಡಲ್ ವುಡ್ ನಟ-ನಟಿಯರು ಶುಭ ಹಾರೈಸಿದ್ದಾರೆ.