ಡಿಕೆ ಶಿವಕುಮಾರ್‌ ಫೋಟೋಗಳು ಹೇಳಿದ ಸತ್ಯಗಳು..? ಆ ಫೋಟೋಗಳಲ್ಲಿ ಏನಿದೆ..?

ಕನಕಪುರ ತಾಲೂಕಿನಲ್ಲಿ ವಿಶ್ವದ ಅತೀ ಎತ್ತರದ ಏಸುವಿನ ಪತ್ರಿಮೆ ಸ್ಥಾಪನೆಯ ಕ್ರಮವನ್ನು ಮಾಜಿ ಸಚಿವ ಡಿಕೆ ಶಿವಕುಮಾರ್‌ ಸಮರ್ಥಿಸಿಕೊಂಡಿದ್ದಾರೆ.

ಅಲ್ಲದೇ ಒಟ್ಟು ಏಳು ಫೋಟೋಗಳನ್ನು ಹಾಕಿ ತಮ್ಮನ್ನು ಹಿಂದೂ ಧರ್ಮದ ವಿರೋಧಿ ಎಂಬ ರೀತಿಯಲ್ಲಿ ಬಿಂಬಿಸಲು ಯತ್ನಿಸಿದವರಿಗೆ ತಿರುಗೇಟು ಕೊಟ್ಟಿದ್ದಾರೆ. ಒಕ್ಕಲಿಗ ಸಮುದಾಯಕ್ಕೆ ಸರ್ಕಾರದ ಅವಧಿಯಲ್ಲಿ ನೀಡಿರುವ ಕೊಡುಗೆಗಳ ಬಗ್ಗೆಯೂ ಫೋಟೋಗಳನ್ನು ಹಾಕಿದ್ದಾರೆ.

ನಮ್ಮ ಪ್ರಜಾತಂತ್ರ ವ್ಯವಸ್ಥೆಯ ಭದ್ರಬುನಾದಿಯಾದ ಸಮಾನತೆ ಮತ್ತು ಸರ್ವಧರ್ಮ ಸಹಿಷ್ಣುತೆಯಲ್ಲಿ ನಂಬಿಕೆ ಇಟ್ಟಿರುವವನು ನಾನು. ನನ್ನನ್ನು ಏಳು ಬಾರಿ ಗೆಲ್ಲಿಸಿರುವ ಕನಕಪುರ ಕ್ಷೇತ್ರದಲ್ಲಿ ಎಲ್ಲ ಜಾತಿ, ಧರ್ಮದ ಜನರೂ ಇದ್ದಾರೆ. ಅವರ ಭಾವನೆಗಳನ್ನು ಗೌರವಿಸುವುದು ನನ್ನ ಧರ್ಮ.

ಯೇಸು ಪ್ರತಿಮೆಗೆ ಜಾಗ ಕೊಟ್ಟಿರುವುದಷ್ಟೇ ಅಲ್ಲ, ನಾನು ಸಚಿವನಾಗಿದ್ದಾಗ ಕೆಂಪೇಗೌಡ ಪ್ರಾಧಿಕಾರ ರಚನೆಯಾಗಿದೆ. ಮೆಯೋಹಾಲ್ ನಲ್ಲಿ ಕಚೇರಿ ಸ್ಥಾಪನೆಯಾಗಿ, ಬೆಂಗಳೂರಿನಲ್ಲಿ ಐದು ಎಕರೆ ಜಮೀನು ಮಂಜೂರಾಗಿದೆ. ಕೆಂಪೇಗೌಡ ಜಯಂತಿ ಆಚರಣೆ, ತನ್ನಿಮಿತ್ತ ಸರಕಾರಿ ರಜೆ ಘೋಷಣೆ ಮಾಡಿಸಿದ್ದೇನೆ.

ಆದಿಚುಂಚನಗಿರಿ ಶ್ರೀ ದಿವಂಗತ ಬಾಲಗಂಗಾಧರನಾಥ ಶ್ರೀಗಳ ಹುಟ್ಟೂರು ರಾಮನಗರದ ಬಿಡದಿಯ ಬಾಣಂದೂರು ಹಾಗೂ ಸಿದ್ದಗಂಗಾ ಶ್ರೀಗಳಾದ ಶಿವೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ರಾಮನಗರದ ಮಾಗಡಿ ಗ್ರಾಮದ ಪ್ರಗತಿಗೆ ತಲಾ 25 ಕೋಟಿ ರುಪಾಯಿ ನಮ್ಮ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಂಜೂರಾಗಿದೆ.

ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಸಾಹೇಬರ ಸಂವಿಧಾನ ಸುಡಲು ಮುಂದಾದ ಅಲ್ಪರಿಂದ ಪಾಠ ಹೇಳಿಸಿಕೊಳ್ಳುವ ಜರೂರತ್ತು ನನಗಿಲ್ಲ ಎಂದು ಡಿ ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಡಿ ಕೆ ಶಿವಕುಮಾರ್‌ ಶೃಂಗೇರಿಗೆ ಭೇಟಿ ನೀಡಿದ್ದ ವೇಳೆ ಶ್ರೀಗಳಿಂದ ಆರ್ಶೀವಾದ ಪಡೆದಿದ್ದರು.

ಉಪ ಚುನಾವಣೆಯ ಪ್ರಚಾರದ ವೇಳೆ ಶ್ರೀರಂಗಪಟ್ಟಣದಲ್ಲಿರುವ ರಂಗನಾಥಸ್ವಾಮಿ ದೇವಸ್ಥಾನಕ್ಕೂ ಭೇಟಿ ನೀಡಿದ್ದ ಡಿಕೆಶಿ ಮೈಸೂರು ಹುಲಿ ಟಿಪ್ಪಿ ಸುಲ್ತಾನ್‌ ಸಮಾಧಿಗೂ ಹೋಗಿ ನಮನ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here