ADVERTISEMENT
ಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ಅಮರಾವತಿ ಸಂಸದ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್ ಕಳುಹಿಸಿದೆ. ಇವರ ಜಾಮೀನು ಅರ್ಜಿ ವಿಚಾರಣೆ ಏಪ್ರಿಲ್ 29 ರಂದು ನಡೆಯಲಿದೆ.
ಏಪ್ರಿಲ್ 27 ರಂದು ಜಾಮೀನು ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ಮುಂಬೈ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಇದಕ್ಕೂ ಮುನ್ನಾ ಮುಂಬೈ ಪೊಲೀಸರು ರಾಣಾ ದಂಪತಿಯನ್ನು ಬಾಂದ್ರಾದಲ್ಲಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಭಾನುವಾರ ಹಾಜರುಪಡಿಸಿದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರ ಖಾಸಗಿ ನಿವಾಸದ ಹೊರಗಡೆ ಹನುಮಾನ್ ಚಾಲೀಸಾ ಪಠಿಸುವ ಯೋಜನೆಯನ್ನು ರದ್ದುಗೊಳಿಸಿದ ನಂತರ ಗೊವಿವಿಧ ಗುಂಪುಗಳ ನಡುವೆ ದ್ವೇಷ ಮೂಡಿಸುವ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಶನಿವಾರ ರಾಣಾ ದಂಪತಿಯನ್ನು ಬಂಧಿಸಿದ್ದರು.
ADVERTISEMENT