ಇಂದು ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿರುವ ಪ್ರಸಕ್ತ 2022ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಿದರು.
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.
ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.
ಉತ್ತೀರ್ಣ ಪ್ರಮಾಣ:
ಬಾಲಕಿಯರು: ಶೇ.68.72
ಬಾಲಕರು: ಶೇ.55.226,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
4,22,966 ವಿದ್ಯಾರ್ಥಿಗಳು ಉತ್ತೀರ್ಣ.
ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು.#PUCResults
— B.C Nagesh (Modi Ya Parivara) (@BCNagesh_bjp) June 18, 2022
ಈ ವರ್ಷ ಒಟ್ಟು 6,83,563 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅವರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಈ ವರ್ಷ ಪಿಯುಸಿ ಪರೀಕ್ಷೆಯಲ್ಲಿ 4 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಈ ಬಾರಿ ಹೆಚ್ಚು ಫಲಿತಾಂಶ ಬಂದಿದೆ.
ಗ್ರಾಮಾಂತರ ಭಾಗದಲ್ಲಿ ಶೇಕಡಾ 62.18, ನಗರ ಪ್ರದೇಶದಲ್ಲಿ ಶೇ.61.78ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ
ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ,ವಿಜಯಪುರ 3ನೇ ಸ್ಥಾನ, ಬೆಂಗಳೂರು ದಕ್ಷಿಣ ನಾಲ್ಕನೇ ಸ್ಥಾನ, ಉತ್ತರ ಕನ್ನಡ 5ನೇ ಸ್ಥಾನ ಹಾಗೂ ಚಿತ್ರದುರ್ಗ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.
ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ www.karresults.nic.in ಗೆ ಭೇಟಿ ನೀಡಿ.
ಪೂರಕ ಪರೀಕ್ಷೆ ದಿನಾಂಕ ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುತ್ತದೆ.
ಇಂದಿನಿಂದಲೇ ಮಕ್ಕಳ ಉತ್ತರ ಪತ್ರಿಕೆ ನೋಡಲು ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ನಲ್ಲಿ ಅಪ್ಲೈ ಮಾಡಿ ಉತ್ತರ ಪತ್ರಿಕೆ ಪಡೆದುಕೊಳ್ಳಬಹುದು. ಸ್ಕ್ಯಾನಿಂಗ್ ಪ್ರತಿಗೆ 530 ರೂಪಾಯಿ ಪಾವತಿಸಬೇಕು. ಜೂನ್ 30ರ ಉತ್ತರ ಪತ್ರಿಕೆ ಪಡೆಯಲು ಕೊನೆಯ ದಿನಾಂಕವಾಗಿದೆ. ಮರು ಮೌಲ್ಯ ಮಾಪನಕ್ಕೆ 1,670 ರೂಪಾಯಿ ನಿಗದಿ ಮಾಡಲಾಗಿದೆ.