ಪುಲ್ವಾಮಾದ ದ್ರಾಬ್ಗಾಮ್ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ 3 ಜನ ಭಯೋತ್ಪಾದಕರನ್ನು ಪೊಲೀಸರು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಮಾಹಿತಿ ನೀಡಿದ್ದಾರೆ.
3 ಜನ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಅವರ ಗುರುತನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ. ಶಸ್ತ್ರಾಸ್ತ್ರ, ಮದ್ದುಗುಂಡು ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯ ಮುಂದುವರೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಹತರಾದ ಭಯೋತ್ಪಾದಕರಲ್ಲಿ ಒಬ್ಬನ ಗುರುತನ್ನು ಜುನೈದ್ ಶೀರ್ಗೋಜ್ರಿ ಎಂದು ಅಧಿಕಾರಿಗಳು ಪಟ್ಟಿ ಮಾಡಿದ್ದಾರೆ.
ಪುಲ್ವಾಮಾ ಎನ್ಕೌಂಟರ್ನಲ್ಲಿ 3 ಜನ ಹತರಾಗಿದ್ದಾರೆ. ಭಯೋತ್ಪಾದಕರು ಸ್ಥಳೀಯರಾಗಿದ್ದು, ಭಯೋತ್ಪಾದಕ ಸಂಘಟನೆ ಎಲ್ಇಟಿ ಜೊತೆ ನಂಟು ಹೊಂದಿದ್ದಾರೆ. ಇದರಲ್ಲಿ ಒಬ್ಬನನ್ನು ಜುನೈದ್ ಶೀರ್ಗೋಜಿ ಎಂದು ಗುರುತಿಸಲಾಗಿದೆ. ಮೇ 13 ರಂದು ನಮ್ಮ ಸಹೋದ್ಯೋಗಿ ರೆಯಾಜ್ ಅಹ್ಮದ್ ಹುತಾತ್ಮನಾಗಿದ್ದಾನೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕರು ಹೇಳಿದ್ದಾರೆ.
ಇದಕ್ಕೂ ಮೊದಲು, ಪುಲ್ವಾಮಾದ ದ್ರಾಬ್ಗಾಮ್ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಂದಿದ್ದರು. ಸಂಜೆ 6.55ರ ಸುಮಾರಿಗೆ ಎನ್ಕೌಂಟರ್ ಆರಂಭವಾಗಿದ್ದು, ಕಾಶ್ಮೀರ ವಲಯ ಪೊಲೀಸರು ಟ್ವೀಟ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.