45 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 1 ರಿಂದ ಲಸಿಕೆ ಕೇಂದ್ರ ಸರ್ಕಾರ ಆದೇಶ

45 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 1 ರಿಂದ ಲಸಿಕೆ ಹಾಕಬಹುದು ಅಂತ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ . ಕೇಂದ್ರ ಸಂಪುಟ ಸದಸ್ಯರ ಸಭೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ .

ಸಾಕಷ್ಟು ಪ್ರಮಾಣದಲ್ಲಿ ಲಸಿಕೆಗಳು ಲಭ್ಯ ಇವೆ ಎಂದು ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ . ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಈ ಲಸಿಕೆ ಯನ್ನು ನೀಡಲು ನಿರ್ಧರಿಸಲಾಗಿದೆ.

ಅರ್ಹರು ಡಲೇ ನೋಂದಣಿ ಮಾಡಿಸಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಮನವಿ ಮಾಡಿದರು. ಸರ್ಕಾರಿ ದ್ರಗಳಲ್ಲಿ ನೀಡುವ ಲಸಿಕೆ ಉಚಿತವಾಗಿರುತ್ತದೆ. ಖಾಸಗಿ ಆಸ್ಪತ್ರೆಯಲ್ಲಿ ನಿಗದಿತ ದರ ನೀಡಿ ಲಸಿಕೆ ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here