5 ಸಾವಿರ ರೂಪಾಯಿ ಪರಿಹಾರ ಪಡೆಯಲು ಷರತ್ತು ಸಡಿಲಿಕೆ – ಎಲ್ಲರಿಗೂ ವಿಶೇಷ ಪ್ಯಾಕೇಜ್‌ ಪರಿಹಾರ

ಸಿಎಂ ಯಡಿಯೂರಪ್ಪ ಸರ್ಕಾರ ಈಗಾಗಲೇ ಘೋಷಿಸಿರುವ ವಿಶೇಷ ಪ್ಯಾಕೇಜ್‌ಗಳ ಲಾಭ ಪಡೆದುಕೊಳ್ಳಲು ವಿಧಿಸಲಾಗಿರುವ ಷರತ್ತುಗಳಲ್ಲಿ ಸಡಿಲಿಕೆ ಮಾಡಲಾಗಿದೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಈ ಮಾಹಿತಿ ನೀಡಿದ್ದಾರೆ.

ಎಲ್ಲಾ ಆಟೋಚಾಲಕರು, ಟ್ಯಾಕ್ಸಿ, ಕ್ಯಾಬ್‌ ಚಾಲಕರು, ಕ್ಷೌರಿಕರು, ಮಡಿವಾಳರಿಗೆ ಐದು ಸಾವಿರ ರೂಪಾಯಿ ನೀಡಲು ನಿರ್ಧರಿಸಲಾಗಿದೆ. ಈ ಹಣಕಾಸು ಪರಿಹಾರ ಸಂಬಂಧ ವಿಧಿಸಲಾಗಿರುವ ಷರತ್ತುಗಳನ್ನು ಸಡಿಲಿಸಲಾಗಿದೆ. ವಿಶೇಷ ಪ್ಯಾಕೇಜ್‌ ವ್ಯಾಪ್ತಿಗೆ ಬರುವ ಇವರೆಲ್ಲರಿಗೂ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಮೆಕ್ಕೆ ಜೋಳ ಬೆಳೆದ ರೈತರಿಗೆ ಐದು ಸಾವಿರ ರೂ.ನೀಡಲು ನಿರ್ಧರಿಸಲಾಗಿದ್ದು ಹಿಂಗಾರು- ಮುಂಗಾರು ನಿಯಮ ಇಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here