ಬೆಂಗಳೂರು ಪೊಲೀಸ್ ಕಮೀಷನರ್ ಆಗಿದ್ದ ಐಪಿಎಸ್ ಕಮಲ್ ಪಂತ್ ಹಾಗು ರಾಜ್ಯ ಕೆಎಸ್ಆರ್ಪಿ ಎಡಿಜಿಪಿ ಆಗಿರುವ ಐಪಿಎಸ್ ಅಲೋಕ್ ಕುಮಾರ್ ಅವರನ್ನು ಒಳಗೊಂಡಂತೆ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಇಂದು ಸೋಮವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ನಗರದ ನೂತನ ಆಯುಕ್ತರಾಗಿ ಸಿ. ಹೆಚ್. ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಂಡಿದ್ದಾರೆ.
ಕೆಎಸ್ಆರ್ಪಿಯ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ ವರ್ಗಾವಣೆಗೊಂಡಿದ್ದಾರೆ.
ಕ್ರೈಂ ಮತ್ತು ಟೆಕ್ನಿಕಲ್ ಸೆಲ್ನಲ್ಲಿ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಕೆಎಸ್ಆರ್ಪಿ ಎಡಿಜಿಪಿಯಾಗಿ, ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಎಂ. ಎನ್. ಅನುಚೇತ್ ಸಿಐಡಿಯ ಎಸ್ಪಿಯಾಗಿ ವರ್ಗಾವಣೆಯಾಗಿದ್ದಾರೆ.