5ನೇ ಮತ್ತು 8ನೇ ತರಗತಿಗೆ ಸೋಮವಾರದಿಂದ ನಡೆಯಬೇಕಿದ್ದ ಪರೀಕ್ಷೆಯನ್ನು ಸರ್ಕಾರ ಮುಂದೂಡಿದೆ. ಮಾರ್ಚ್ 13ರಿಂದ ಈ ಎರಡು ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ಆರಂಭ ಆಗಬೇಕಿತ್ತು.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಆದರೆ ಹೈಕೋರ್ಟ್ ನಿನ್ನೆ ತನ್ನ ತೀರ್ಪಿನಲ್ಲಿ 5ನೇ ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಸಂಬಂಧ ಹೊರಡಿಸಿದ್ದ ಸುತ್ತೋಲೆಯನ್ನು ವಜಾಗೊಳಿಸಿತ್ತು.
ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿಗದಿಪಡಿಸಿ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು.
ADVERTISEMENT
ADVERTISEMENT