ಆನ್‌ಲೈನ್‌ ಶಿಕ್ಷಣ ರದ್ದು, ಶುಲ್ಕ ವಸೂಲಿ ಮಾಡಿದರೆ ದೂರು ಕೊಡಿ – ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿಕೆ

ಎಲ್‌ಕೆಜಿಯಿಂದ ಹಿಡಿದು 5ನೇ ತರಗತಿವರೆಗೆ ಆನ್‌ಲೈನ್‌ ಶಿಕ್ಷಣವನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇವತ್ತು ಬೆಂಗಳೂರಲ್ಲಿ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ನೇತೃತ್ವದಲ್ಲಿ ನಡೆದ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ತಜ್ಞರ ಸಭೆಯಲ್ಲಿ ಆನ್‌ಲೈನ್‌ ಶಿಕ್ಷಣ ರದ್ದುಗೊಳಿಸಿ ತೀರ್ಮಾನ ಕೈಗೊಳ್ಳಲಾಗಿದೆ.

ಕರ್ನಾಟಕ ಸರ್ಕಾರದ ಪಠ್ಯಕ್ರಮ, ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯಕ್ರಮ ಆಧರಿತ ರಾಜ್ಯದ ಎಲ್ಲಾ ಶಾಲೆಗಳಿಗೂ ಈ ಆದೇಶ ಅನ್ವಯಿಸಲಿದೆ.

ಆನ್‌ಲೈನ್‌ ಶಿಕ್ಷಣದ ಹೆಸರಲ್ಲಿ ಶಾಲೆಗಳು ಪೋಷಕರಿಂದ ಶುಲ್ಕ ವಸೂಲಿ ಮಾಡುವಂತಿಲ್ಲ. ಶುಲ್ಕ ಹೆಚ್ಚಳ ಮಾಡಿದರೆ ಅಂತಹ ಶಾಲೆಗಳ ವಿರುದ್ಧ ಪೋಷಕರು ಸಹಾಯವಾಣಿಗೆ ದೂರು ನೀಡಬಹುದು ಎಂದೂ ಶಿಕ್ಷಣ ಸಚಿವರು ಹೇಳಿದ್ದಾರೆ.

ಜುಲೈ 1ರಿಂದ ಶಾಲೆಗಳು ಆರಂಭವಾಗಲ್ಲ ಎಂದು ಸ್ಟಷ್ಟಪಡಿಸಿರುವ ಸಚಿವ ಸುರೇಶ್‌ ಕುಮಾರ್‌ ಆಗಸ್ಟ್‌ 15ರ ನಂತರ ಶಾಲೆಗಳನ್ನು ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here