ಅಮಿತ್‌ ಶಾರಿಂದ ಲಾಕ್‌ಡೌನ್‌ ಉಲ್ಲಂಘಿಸಿ ಚುನಾವಣಾ ಪ್ರಚಾರ, ಕ್ರಮ ಯಾಕಿಲ್ಲ – ಡಿ ಕೆ ಶಿವಕುಮಾರ್‌ ಕಿಡಿ

Paycm ಪೋಸ್ಟರ್

ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮವನ್ನು ಯಾವುದೇ ಕಾರಣಕ್ಕೆ ನಿಲ್ಲಿಸಲ್ಲ. ರಾಜ್ಯ ಸರ್ಕಾರ ಅನುಮತಿ ಕೊಟ್ಟ ಬಳಿಕ ಕಾನೂನು ಚೌಕಟ್ಟಿನಲ್ಲಿ ನಡೆಸಿಯೇ ನಡೆಸ್ತೇವೆ ಎಂದು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ.

ಅನುಮತಿ ನಿರಾಕರಿಸಿರುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಕೋರ್ಟ್‌ಗೆ ಹೋಗ್ತೇವೆ. ಯಡಿಯೂರಪ್ಪನವರು ನುಡಿದಂತೆ ನಡೆಯುವವರು, ಸಣ್ಣ ರಾಜಕಾರಣ ಮಾಡಲ್ಲ ಎಂದುಕೊಂಡಿದ್ದೆ. ಆದರೆ ನನ್ನ ನಂಬಿಕೆ ಹುಸಿ ಆಗಿದೆ ಕಿಡಿಕಾರಿದ್ದಾರೆ.

ಬಿಜೆಪಿ ನಾಯಕರು ದೇಶಾದ್ಯಂತ ರಾಜಕೀಯ ಕಾರ್ಯಕ್ರಮ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳ, ಬಿಹಾರದಲ್ಲಿ ಅಮಿತ್‌ ಶಾ ಆನ್‌ಲೈನ್‌ ಮೂಲಕ ರಾಜಕೀಯ ರ್ಯಾಲಿ ನಡೆಸುತ್ತಿದ್ದಾರೆ. ಅವರು ಲಾಕ್‌ಡೌನ್‌ ಉಲ್ಲಂಘನೆ ಮಾಡುತ್ತಿದ್ದರೂ ಕ್ರಮಕೈಗೊಳ್ಳುತ್ತಿಲ್ಲ. ಆದರೆ ನಾವು ಕಾನೂನಾತ್ಮಕವಾಗಿ ಅನುಮತಿ ಕೇಳಿದರೂ ಕೊಡುತ್ತಿಲ್ಲ ಎಂದು ಬಿಜೆಪಿ ವಿರುದ್ಧ ಡಿಕೆಶಿವಕುಮಾರ್‌ ಆಕ್ರೋಶ ಹೊರಹಾಕಿದ್ದಾರೆ.

LEAVE A REPLY

Please enter your comment!
Please enter your name here