ಆರ್‌ಟಿಐ ಅಡಿ ಪ್ರಧಾನಿ ಕಾಳಜಿ ನಿಧಿ ಮಾಹಿತಿ – ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಪ್ರಧಾನಮಂತ್ರಿ ಕಾಳಜಿ ನಿಧಿಯಲ್ಲಿ ಸಂಗ್ರಹ ಆಗಿರುವ ದೇಣಿಗೆಯ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ವಿವರ ಬಹಿರಂಗಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಮೇಲ್ಮನವಿ ಸಂಬಂಧ ಉತ್ತರ ನೀಡುವಂತೆ ದೆಹಲಿ ಹೈಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದು, ವಿಚಾರಣೆಯನ್ನು ಆಗಸ್ಟ್‌ 28ಕ್ಕೆ ಮುಂದೂಡಿದೆ.

ಧಾನಮಂತ್ರಿ ಕಾಳಜಿ ನಿಧಿಯನ್ನು ಸರ್ಕಾರದ ಆದೇಶದ ಮೂಲಕ ಸ್ಥಾಪಿಸಲಾಗಿದ್ದು, ದೇಣಿಗೆದಾರರಿಗೆ ಆದಾಯ ತೆರಿಗೆ ಕಾಯ್ದೆ ಮತ್ತು ಕಂಪನಿ ಕಾಯ್ದೆಯಡಿ ತೆರಿಗೆ ವಿನಾಯಿತಿಯನ್ನು ನೀಡಲಾಗುತ್ತಿದೆ. ಪ್ರಧಾನಮಂತ್ರಿ, ಹಣಕಾಸು ಸಚಿವರು, ರಕ್ಷಣಾ ಸಚಿವರು ಮತ್ತು ಕೇಂದ್ರ ಗೃಹ ಸಚಿವರು ನಿಧಿ ಟ್ರಸ್ಟಿಗಳಾಗಿದ್ದು ಇದೊಂದು ಸಾರ್ವಜನಿಕ ಪ್ರಾಧಿಕಾರವಾಗಿದೆ. ಹೀಗಾಗಿ ಆರ್‌ಟಿಐ ಅಡಿಯಲ್ಲಿ ಮಾಹಿತಿಯನ್ನು ನೀಡಬೇಕೆಂದು ಕೋರಿ ಸಮ್ಯಕ್‌ ಅಗರ್‌ವಾಲ್‌ ಎನ್ನುವವರು ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.

ಆದರೆ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಲು ಮಾಹಿತಿ  ಆಯೋಗ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಆಯೋಗದ ಕ್ರಮ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

LEAVE A REPLY

Please enter your comment!
Please enter your name here