ಬೆಂಗಳೂರು- ಮಾಜಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಆರೋಗ್ಯ ವಿಚಾರಿಸಲು ಆಗಮಿಸಿದ ವಿವಿಧ ಮಠಗಳ ಸ್ವಾಮೀಜಿಗಳು. ಸಿದ್ದರಾಮಯ್ಯನವರ ಅನಾರೋಗ್ಯ ಹಿನ್ನೆಲೆಯಲ್ಲಿ ಕಾಗಿನೆಲೆಯ ನಿರಂಜನಾನಂದಪುರಿ ಸ್ವಾಮೀಜಿ, ಈಶ್ವರನಾನಂದಪುರಿ ಸ್ವಾಮೀಜಿ, ಚಿತ್ರದುರ್ಗದ ಭೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಆಶೀರ್ವದಿಸಿದರು.ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ವೇಗಸ್ ಆಸ್ಪತ್ರೆಯಲ್ಲಿ ಸುತ್ತೂರು ಮಠಾಧೀಶ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಲು ಆಗಮಿಸಿದ ಆದಿಚುಂಚನಗಿರಿ ಕ್ಷೇತ್ರದ ಶ್ರೀ‌ ನಿರ್ಮಲನಾಂದನಾಥ ಸ್ವಾಮೀಜಿಯವರು ಸಿದ್ದರಾಮಯ್ಯನವರು ಶೀಘ್ರ ಗುಣಮುಖವಾಗಲೆಂದು ಪೂಜೆ ಮಾಡಿ ಆಶೀರ್ವಾದ ಮಾಡಿದರು.

 

LEAVE A REPLY

Please enter your comment!
Please enter your name here