ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಕಳೆದ ವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಎಸಿಬಿ ದಾಳಿ ವೇಳೆ ಜಮೀರ್ ಆದಾಯಕ್ಕಿಂತ ಎರಡು ಸಾವಿರ ಪಟ್ಟು ಜಾಸ್ತಿ ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ 87 ಕೋಟಿ ಹೆಚ್ಚುವರಿ ಆಸ್ತಿಯ ಸಮರ್ಪಕ ದಾಖಲೆಗಳನ್ನು ಒದಗಿಸುವಂತೆ ಎಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ದಾಳಿ ನಡೆದ ಮಾರನೇ ದಿನವೇ ಕಚೇರಿಗೆ ಬಂದು ದಾಖಲೆ ಒದಗಿಸುವಂತೆ ಎಸಿಬಿ ಅಧಿಕಾರಿಗಳು ತಿಳಿಸಿದ್ದು, ಬಕ್ರೀದ್ ಕಾರಣ ನೀಡಿ ಜಮೀರ್ ಕಾಲಾವಕಾಶ ಪಡೆದಿದ್ದರು. ಸದ್ಯ ಬಕ್ರೀದ್ ಮುಗಿದ ಕಾರಣ ಜಮೀರ್ ದಾಖಲೆ ಸಮೇತ ಎಸಿಬಿ ಅಧಿಕಾರಿಗಳ ಮುಂದೆ ಹಾಜರಾಗಬೇಕಿದೆ.