ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಂತಿಮ ಆಗಿದ್ದಾರೆ. ಈ ಬಾರಿ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ ಅವರಿಗೆ ಕಾಂಗ್ರೆಸ್ ಟಿಕೆಟ್ ದೃಢೀಕರಿಸಿದೆ.
ಎರಡು ದಿನಗಳ ಹಿಂದೆ ಕಾಂಗ್ರೆಸ್ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಕಾರ್ಕಳದಲ್ಲಿ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಇದನ್ನೂ ಓದಿ:
ADVERTISEMENT
ಕಾಂಗ್ರೆಸ್ ನಾಯಕ ಮಿಥುನ್ ರೈ ವಿರುದ್ಧ ನಟ ರಕ್ಷಿತ್ ಶೆಟ್ಟಿ ಕಿಡಿ
ಖುದ್ದು ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮುನಿಯಾಲ್ ಅವರ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಕಾರ್ಕಳದಲ್ಲಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಮುನಿಯಾಲ್ ಅವರಿಗೆ ಸೂಚಿಸಲಾಗಿದೆ.
ವೀರಪ್ಪ ಮೊಯ್ಲಿ ಸಹಮತ:
ಮುನಿಯಾಲ್ ಅವರಿಗೆ ಟಿಕೆಟ್ ಕೊಡುವುದಕ್ಕೆ ಮಾಜಿ ಸಿಎಂ ಮತ್ತು ಮಾಜಿ ಸಂಸದ ವೀರಪ್ಪ ಮೊಯ್ಲಿ ಅವರು ಕೂಡಾ ಸಹಮತ ವ್ಯಕ್ತಪಡಿಸಿದ್ದಾರೆ.
ಮುನಿಯಾಲ್ ಅವರಿಗೆ ಟಿಕೆಟ್ ಅಂತಿಮ ಆಗ್ತಿರುವ ಬಗ್ಗೆ ಪಕ್ಷದ ಆಂತರಿಕ ಮೂಲಗಳಿಂದ ಮಾಹಿತಿ ಸಿಕ್ತಿದ್ದಂತೆ ಕಾರ್ಕಳ ಕಾಂಗ್ರೆಸ್ ನಲ್ಲಿ ಸಂತಸ ಮತ್ತು ನೆಮ್ಮದಿ ಮೂಡಿದೆ. ಪಕ್ಷದ ನಾಯಕರ ಒಗ್ಗಟ್ಟಿನ ಹೋರಾಟಕ್ಕೆ ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಾರ್ಕಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದೇ ಸವಾಲಾಗಿತ್ತು. ಕಳೆದ ಬಾರಿಯೇ ಮುನಿಯಾಲ್ ಅವರಿಗೆ ಟಿಕೆಟ್ ಕೊಟ್ಟಿದ್ದರೆ ಕಾಂಗ್ರೆಸ್ ಗೆಲ್ಲುತ್ತಿತ್ತು ಎಂಬ ಅಭಿಪ್ರಾಯವಿತ್ತಾದರೂ ಕೊನೆಯ ಕ್ಷಣದಲ್ಲಿ ಆಂತರಿಕ ಕಚ್ಚಾಟದಿಂದ ಮತ್ತೆ ಗೋಪಾಲ ಭಂಡಾರಿ ಅವರಿಗೆ ಟಿಕೆಟ್ ನೀಡಿದ್ದು ಕಾಂಗ್ರೆಸ್ ಸೋಲಿಗೆ ಕಾರಣವಾಗಿತ್ತು.
ಸುನಿಲ್ ಕುಮಾರ್ ಗೆ ಸವಾಲು:
ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿರುವುದು ಇಂಧನ ಸಚಿವ ಸುನಿಲ್ ಕುಮಾರ್ ಅವರಿಗೆ ದೊಡ್ಡ ಸವಾಲಾಗಬಹುದು.
ಮುನಿಯಾಲ್ ತಮ್ಮ ವಿರುದ್ಧ ನಿಂತರೆ ಸೋತೆ ಬಿಡುತ್ತೇನೆ ಎಂಬ ಭೀತಿಯಲ್ಲಿ ಸ್ವತಃ ಸುನಿಲ್ ಕುಮಾರ್ ಅವರೇ ಮುನಿಯಾಲ್ ವಿರುದ್ಧ ಈಡಿ ದಾಳಿ ಮಾಡಿಸಿದ್ದರು ಎಂದು ಪ್ರತಿಕ್ಷಣ ನ್ಯೂಸ್ ಗೆ ನೀಡಿದ್ದ ಸಂದರ್ಶನದಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆರೋಪಿಸಿದ್ದರು.
ADVERTISEMENT