ADVERTISEMENT
ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನ್ನಿರತ್ನ ನಾಯ್ಡು ಮೇಲೆ ಮೊಟ್ಟೆ ಎಸೆಯಲಾಗಿದೆ. ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಲಕ್ಷ್ಮೀದೇವಿ ನಗರ ವಾರ್ಡ್ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜಯಂತಿ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಮೊಟ್ಟೆ ಎಸೆಯಲಾಗಿದೆ.
ಕಂಠೀರವ ಸ್ಟೇಡಿಯಂ ಬಳಿ ಬರುತ್ತಿದ್ದ ವೇಳೆ ಮುನಿರತ್ನ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿದೆ. ಬಳಿಕ ಮುನಿರತ್ನ ಮೇಲೂ ಮೊಟ್ಟೆ ಎಸೆಯಲಾಗಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.
ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವುದನ್ನು ಖಂಡಿಸಿ ರಸ್ತೆಯಲ್ಲೇ ಕುಳಿತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ADVERTISEMENT