ಸುಪ್ರೀಂಕೋರ್ಟ್​​ನಿಂದ ಮಹತ್ವದ ಆದೇಶ : ಅವಿವಾಹಿತ ಮಹಿಳೆಯರಿಗೂ ಗರ್ಭಪಾತದ ಹಕ್ಕು

ವಿಶ್ವ ಗರ್ಭಪಾತ ಸುರಕ್ಷಿತ ದಿನದಂದೇ ಸುಪ್ರೀಂಕೋರ್ಟ್​ ಮಹತ್ವದ ಆದೇಶ ಹೊರಡಿಸಿದೆ. ವಿವಾಹಿತ ಮಹಿಳೆಯರಂತೆಯೇ ಅವಿವಾಹಿತ ಮಹಿಳೆಯರೂ ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕು ಹೊಂದಿದ್ದಾರೆ ಎಂದು ಸುಪ್ರೀಂಕೋರ್ಟ್​​ನ ಪೀಠ ಇಂದು ತೀರ್ಪು ನೀಡಿದೆ.

ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತ ಪ್ರಕ್ರಿಯೆಗೆ ಅರ್ಹರಾಗಿದ್ದಾರೆ ಮತ್ತು ಈ ನಿಟ್ಟಿನಲ್ಲಿ ವಿವಾಹಿತ ಮತ್ತು ಅವಿವಾಹಿತ ಮಹಿಳೆಯ ನಡುವೆ ಯಾವುದೇ ವ್ಯತ್ಯಾಸವನ್ನು ಮಾಡುವುದು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಅವಿವಾಹಿತ ಮಹಿಳೆಯರೂ 24 ತಿಂಗಳ ಒಳಗಾಗಿ ಗರ್ಭಪಾತ ಮಾಡಿಸಿಕೊಳ್ಳಬಹುದು ಎಂದು ಹೇಳಿದೆ.

ಗರ್ಭಾವಸ್ಥೆಯ ವೈದ್ಯಕೀಯ ಕಾಯ್ದೆ ಪ್ರಕಾರ ವಿವಾಹಿತ ಮಹಿಳೆಯರಿಗೆ ಮಾತ್ರ ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶವಿತ್ತು. ಅವಿವಾಹಿತ ಮಹಿಳೆಯರಲ್ಲಿ ಅಸುರಕ್ಷಿತ ಗರ್ಭಪಾತದ ಪ್ರಮಾಣ ಹೆಚ್ಚಾಗಿದ್ದನ್ನು ಗಮನಿಸಿದ ಸುಪ್ರೀಂಕೋರ್ಟ್​ ಪೀಠ ಈ ಆದೇಶ ನೀಡಿದೆ.