ಅಪಘಾತ : ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಸ್ಪರ್ಧಿ ಬಾಲಕಿ’ ಸಮನ್ವಿ’ ಸಾವು

ಬೈಕ್ ಹಾಗೂ ಟಿಪ್ಪರ್ ನಡುವಿನ ಅಪಘಾತದಲ್ಲಿ ಖಾಸಗಿ ವಾಹಿನಿಯ ಜನಪ್ರಿಯ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಬಾಲಕಿ ಸಮನ್ವಿ (6) ಸಾವನ್ನಪ್ಪಿದ್ದಾರೆ.

ತಾಯಿ ಜೊತೆ ಸಮನ್ವಿ ಸ್ಕೂಟರ್​ನ ಹಿಂಬದಿ ಕುಳಿತು ಹೊರಟಿದ್ದರು. ಈ ವೇಳೆ ಅತಿ ವೇಗದಿಂದ ಬಂದ ಟಿಪ್ಪರ್ ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ.

ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳ್ತಿದ್ದಾಗ ಸಂಜೆ 4.30 ರ ವೇಳೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬಾಲಕಿ ಸಮನ್ವಿ ಸಾವನ್ನಪ್ಪಿದ್ದಾರೆ. ಶೀಘ್ರವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ತಾಯಿ ಅಮೃತಾ ನಾಯ್ಡುಗೆ ಗಾಯಗಳಾಗಿವೆ.

ಮರಣೋತ್ತರ ಪರೀಕ್ಷೆಗೆ ಬಾಲಕಿ ಮೃತದೇಹ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here