ಕಾಟೇರಾ ಸಿನಿಮಾಕ್ಕೆ ಗೆಲುವು ಸಿಕ್ಕ ಬಳಿಕ ನಟ ದರ್ಶನ್ ಅವರು ತಮ್ಮ ವಿರೋಧಿಗಳಿಗೆ ಸಂದೇಶ ರವಾನಿಸಿದ್ದಾರೆ.
ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು.
ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ.
ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ.
ಕಾಲಾಯ ತಸ್ಮಯ್ ನಮಃ
ಎಂದು ನಟ ದರ್ಶನ್ ಅವರು ದುಬೈನಲ್ಲಿ ತಾವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
ADVERTISEMENT
ಜನವರಿ 3ರಂದು ಅವಧಿ ಮೀರಿ ಪಾರ್ಟಿ ಮಾಡಿದ್ದರ ಸಂಬಂಧ ಬೆಂಗಳೂರಿನ ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ನಟ ದರ್ಶನ್ ಸೇರಿ 8 ಮಂದಿಗೆ ನೋಟಿಸ್ ಜಾರಿ ಮಾಡಿದ್ದರು. ಜನವರಿ 8ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.
ಆದರೆ ಜನವರಿ 4ರಂದೇ ನಿರ್ದೇಶಕ ತರುಣ್ ಸುಧೀರ್ ಅವರ ಜೊತೆಗೆ ಕಾಟೇರಾ ಸಿನಿಮಾದ ಪ್ರಚಾರಕ್ಕಾಗಿ ದರ್ಶನ್ ಅವರು ದುಬೈಗೆ ತೆರಳಿದ್ದರು.
ADVERTISEMENT